ಅಂಗನವಾಡಿ ಕಾರ್ಯಕರ್ತೆಯರ ಜೀವಕ್ಕೆ ಹಾನಿಯಾದರೆ ಸರ್ಕಾರವೇ ಹೊಣೆ

Social Share

ಬೆಂಗಳೂರು,ಜ.20- ಮೈ ಕೊರೆಯುವ ಚಳಿಯಲ್ಲೂ ನಾವು ಹೋರಾಟ ಮುಂದುವರೆಸಿದ್ದೇವೆ ಒಂದು ವೇಳೆ ನಮ್ಮ ಜೀವಕ್ಕೆ ಏನಾದರೂ ತೊಂದರೆಯಾದರೆ ಅದಕ್ಕೆ ಸರ್ಕಾರವೇ ಕಾರಣರಾಗುತ್ತಾರೆ ಎಂದು ಅಂಗನವಾಡಿ ಕಾರ್ಯಕರ್ತೆಯರು ಎಚ್ಚರಿಕೆ ನೀಡಿದ್ದಾರೆ.

ತಮ್ಮ ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆ ಮೂರನೆ ದಿನಕ್ಕೆ ಕಾಲಿಟ್ಟಿದೆ. ಮೈ ಕೊರೆಯುವ ಚಳಿಯಲ್ಲೂ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರದಿಂದ ಯಾರೊಬ್ಬರೂ ಘಟನಾ ಸ್ಥಳಕ್ಕೆ ಆಗಮಿಸದಿರುವುದು ಕಾರ್ಯಕರ್ತೆಯರ ಆಕ್ರೋಶಕ್ಕೆ ಕಾರಣವಾಗಿದೆ.

ನಾವು ನಮ್ಮ ಜೀವ ಹೋದರೂ ಪರ್ವಾಗಿಲ್ಲ. ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಒಂದು ವೇಳೆ ನಮ್ಮಲ್ಲಿ ಯಾರಿಗಾದರೂ ತೊಂದರೆಯಾದರೆ ಅದಕ್ಕೆ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ಕಾಂಗ್ರೆಸ್ ಕದ ತಟ್ಟುತ್ತಿದ್ದಾರೆ ಬಿಜೆಪಿಯ ಪ್ರಭಾವಿ ಶಾಸಕರು

ಸಂಬಂಧಪಟ್ಟ ಸಚಿವರು ಸ್ಥಳಕ್ಕೆ ಬಂದು ಮನವಿ ಸ್ವೀಕರಿಸುವ ಭರವಸೆ ನೀಡಿದ್ದರೂ ಆದರೂ ಅವರು ಮೂರು ದಿನ ಕಳೆದರೂ ಬಂದಿಲ್ಲ. ಇದನ್ನು ನೋಡಿದರೆ ಬಿಜೆಪಿ ಸರ್ಕಾರಕ್ಕೆ ಮಹಿಳೆಯರ ಮೇಲೆ ಕರುಣೆ ಇಲ್ಲ ಎಂಬುದನ್ನು ಸಾಬೀತುಪಡಿಸಿದೆ ಎಂದು ಪ್ರತಿಭಟನಾನಿರತರು ವಾಗ್ದಾಳಿ ನಡೆಸಿದ್ದಾರೆ.

ಮಕ್ಕಳ ಸಮೇತ ಪ್ರತಿಭಟನೆಯಲ್ಲಿ ಪಾಲ್ಗೊಂಡಿರುವ ಕಾರ್ಯಕರ್ತೆಯರು ರಾತ್ರಿ ಇಡಿ ಮೈ ಕೊರೆಯುವ ಚಳಿಯಲ್ಲೂ ಸ್ಥಳ ಬಿಟ್ಟು ಕದಲಲಿಲ್ಲ. ನಮ್ಮ ಬೇಡಿಕೆ ಈಡೇರುವವರೆಗೆ ನಾವು ಇಲ್ಲಿಂದ ಹೋಗುವುದಿಲ್ಲ ಎಂದು ಅವರು ಪಟ್ಟು ಹಿಡಿದಿದ್ದಾರೆ.

ಜೆಡಿಎಸ್ ಅಧಿಕಾರಕ್ಕೆ ಬಂದರೆ ಹಳೇ ಪಿಂಚಣಿ ಯೋಜನೆ ಜಾರಿ

ನಾವು ನಾಳೆಯಿಂದ ನಮ್ಮ ಹೋರಾಟವನ್ನು ತೀವ್ರಗೊಳಿಸಲು ತೀರ್ಮಾನಿಸಿದ್ದೇವೆ. ರಾಜ್ಯದ ವಿವಿಧ ಭಾಗಗಳಿಂದ ಆಗಮಿಸುವ ಮತ್ತಷ್ಟು ಕಾರ್ಯಕರ್ತೆಯರು ನಾಳಿನ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅದಕ್ಕೂ ಸರ್ಕಾರ ಜಪ್ಪಯ್ಯ ಅನ್ನದಿದ್ದರೆ ಉಪವಾಸ ಸತ್ಯಾಗ್ರಹ ನಡೆಸಬೇಕಾಗುತ್ತದೆ ಎಂದು ಅಂಗನವಾಡಿ ಕಾರ್ಯಕರ್ತೆಯರು ಎಚ್ಚರಿಕೆ ನೀಡಿದ್ದಾರೆ.

Anganwadi workers, helpers, protest, Bengaluru,

Articles You Might Like

Share This Article