ಮತ್ತೆ ಬೀದಿಗಿಳಿದ ಅಂಗನವಾಡಿ ಕಾರ್ಯಕರ್ತೆಯರು

Social Share

ಬೆಂಗಳೂರು,ಜ.18- ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಮತ್ತೆ ಬೀದಿಗಿಳಿದಿದ್ದಾರೆ. ಲಗೇಜ್ ಸಮೇತ ರಾಜ್ಯದ ನಾನಾ ಮೂಲೆಗಳಿಂದ ಆಗಮಿಸಿರುವ ಸಾವಿರಾರು ಕಾರ್ಯಕರ್ತೆಯರು ಫ್ರೀಡಂ ಪಾರ್ಕ್‍ನಲ್ಲಿ ಜಮಾಯಿಸಿದ್ದು, ಈ ಬಾರಿ ಬೇಡಿಕೆ ಈಡೇರುವವರೆಗೆ ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರ ಪ್ರಮುಖ ಬೇಡಿಕೆಗಳೇನು..?
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸೇವೆ ಖಾಯಂ ಮಾಡಬೇಕು, ರಾಷ್ಟ್ರೀಯ ಶಿಕ್ಷಣ ಯೋಜನೆಯಾದ ಯನ್ನು ರಾಜ್ಯದಲ್ಲಿ ಜಾರಿ ಮಾಡಿ, ಅಂಗನವಾಡಿ ಕಾರ್ಯಕರ್ತೆಯರಿಗೆ 31 ಸಾವಿರ ವೇತನ ನೀಡಿ ಶಾಲಾ ಶಿಕ್ಷಕರ ಸ್ಥಾನಮಾನ ನೀಡಬೇಕು ಮಿನಿ ಅಂಗನವಾಡಿ ಕೇಂದ್ರಗಳನ್ನು ತಕ್ಷಣ ಮೇಲ್ದರ್ಜೆಗೆ ಏರಿಸಬೇಕು.

ಸುಪ್ರೀಂಕೋರ್ಟ್ ಆದೇಶದ ಪ್ರಕಾರ ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಹಣ ನೀಡಿ ಅವರಿಗೆ ಪೆನ್‍ಷನ್ ಜಾರಿ ಮಾಡಬೇಕು.

ಏರ್‌ಬ್ಯಾಗ್‌ಗಳಲ್ಲಿ ದೋಷ : 17 ಸಾವಿರ ಕಾರುಗಳನ್ನು ವಾಪಸ್ ಪಡೆದ ಮಾರುತಿ

ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಆರೋಗ್ಯವಿಮೆಯಾದ ಇ.ಎಸ್.ಐ. ವ್ಯವಸ್ಥೆ ಕಲ್ಪಿಸಬೇಕು
ತೀವ್ರತರದ ಕಾಯಿಲೆಗಳಿಂದ ಬಳಲುತ್ತಿರುವ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸಂಬಳ ಸಹಿತ ರಜೆ ನೀಡಬೇಕು ಎನ್ನುವುದು ಅಂಗನವಾಡಿ ಕಾರ್ಯಕರ್ತೆಯರ ಪ್ರಮುಖ ಬೇಡಿಕೆಯಾಗಿದೆ.

Anganwadi workers, helpers, protest, pensionary, benefits,

Articles You Might Like

Share This Article