ಮೈಕೊರೆಯುವ ಚಳಿಯಲ್ಲೂ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

Social Share

ಬೆಂಗಳೂರು,ಜ.19- ಮೈ ಕೊರೆಯುವ ಚಳಿಯಲ್ಲೂ ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಹೋರಾಟ ಮುಂದುವರೆಸಿದ್ದು, ಅವರ ಪ್ರತಿಭಟನೆ ಎರಡನೆ ದಿನಕ್ಕೆ ಕಾಲಿಟ್ಟಿದೆ.

ನಿನ್ನೆ ಆರಂಭವಾದ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನಾ ಸ್ಥಳಕ್ಕೆ ಸರ್ಕಾರದ ಯಾವೊಬ್ಬ ಪ್ರತಿನಿಧಿಯೂ ಆಗಮಿಸದ ಹಿನ್ನಲೆಯಲ್ಲಿ ಕಾರ್ಯಕರ್ತೆಯರು ಅಹೋ ರಾತ್ರಿ ಧರಣಿ ಮುಂದುವರೆಸಿದ್ದಾರೆ. ಮೈ ಕೊರೆಯುವ ಚಳಿಯಲ್ಲೂ ಪ್ರತಿಭಟನೆಯಲ್ಲಿ ಭಾಗಿಯಾಗಿರುವ ನೂರಾರು ಕಾರ್ಯಕರ್ತೆಯರು ಫ್ರೀಡಂ ಪಾರ್ಕ್‍ನಲ್ಲಿ ರಾತ್ರಿಯಿಡಿ ನಿದ್ರೆಯಿಲ್ಲದೆ ತಂಗಿದ್ದಾರೆ.

ಶಸ್ತ್ರಸಜ್ಜಿತ ಬ್ಯಾಂಕ್ ದರೋಡೆಕೋರರನ್ನು ಹಿಮ್ಮೆಟ್ಟಿಸಿದ ಮಹಿಳಾ ಪೊಲೀಸರು

ಕನಿಷ್ಠ ವೇತನ, ಗ್ರ್ಯಾಚ್ಯುಟಿ ಸೇರಿದಂತೆ ಹಲವಾರು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಾವು ಈ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಈ ಬಾರಿ ಸಂಬಂಧಪಟ್ಟ ಸಚಿವರು ಬಂದು ನಮ್ಮ ಸಮಸ್ಯೆ ಬಗೆಹರಿಸುವ ತನಕ ನಮ್ಮ ಹೋರಾಟ ನಿಲ್ಲಿಸುವ ಪ್ರಶ್ನೇಯೇ ಇಲ್ಲ ಎಂದು ಪ್ರತಿಭಟನಾಕಾರರು ಸ್ಪಷ್ಟಪಡಿಸಿದ್ದಾರೆ.

Anganwadi, workers, protest, bangalore,

Articles You Might Like

Share This Article