ಅನಿತಾಕುಮಾರಸ್ವಾಮಿ ಆತ್ಮಾವಲೋಕನ ಮಾಡಿಕೊಳ್ಳಲಿ : ಅಶ್ವಥ್ ನಾರಾಯಣ

Social Share

ಬೆಂಗಳೂರು,ಫೆ.22- ಕಾರ್ಯಕ್ರಮಕ್ಕೆ ಕರೆಯದೆ ಶಿಷ್ಟಾಚಾರ ಉಲ್ಲಂಘನೆ ಮಾಡಲಾಗಿದೆ ಎಂಬ ಶಾಸಕಿ ಅನಿತಾಕುಮಾರಸ್ವಾಮಿ ಅವರ ಆರೋಪಕ್ಕೆ ಸಚಿವ ಅಶ್ವಥ್ ನಾರಾಯಣ ತಿರುಗೇಟು ನೀಡಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಚಿವರು, ಹಾರೋಹಳ್ಳಿ ನೂತನ ತಾಲೂಕು ಕಚೇರಿ ಉದ್ಘಾಟನೆ ವೇಳೆ ಅನಿತಾ ಕುಮಾರಸ್ವಾಮಿ ಅವರಿಗೆ ಅಪಮಾನಿಸಲಾಗಿದೆ ಎಂಬರ್ಥದ ಮಾತನ್ನು ಕೇಳಿ ಆಶ್ಚರ್ಯವಾಯಿತು. ಕಾರ್ಯಕ್ರಮ ಶಿಷ್ಟಾಚಾರದ ಪ್ರಕಾರವೇ ಜರುಗಿದರೂ ನಿಗದಿತ ಸಮಯಕ್ಕೆ ಹಾಜರಾಗದೇ, ಈ ರೀತಿ ಮಾತನಾಡುವುದು ಎಷ್ಟರ ಮಟ್ಟಿಗೆ ಸರಿ ಎನ್ನುವುದನ್ನು ಅವರೇ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಟಾಂಗ್ ನೀಡಿದ್ದಾರೆ.

ಇ-ವೀಸಾ ಸ್ವೀಕರಿಸದ ಬ್ರಿಟನ್ ಪ್ರಜೆ ದುಬೈಗೆ ವಾಪಸ್

ನಮ್ಮ ರಾಮನಗರ ಜಿಲ್ಲೆಯ ಜನತೆಯ ಶ್ರೇಯವೇ ನನ್ನ ಆದ್ಯತೆ. ಕ್ಷುಲ್ಲಕ ರಾಜಕಾರಣ, ಕುಟುಂಬ ರಾಜಕಾರಣದ ಬಗ್ಗೆ ನನಗೆ ಆಸಕ್ತಿಯಿಲ್ಲ. ಬಿಜೆಪಿ ಸರ್ಕಾರ ಬರುವ ಮೊದಲು ಅಭಿವೃದ್ಧಿ ಹೇಗೆ ಕುಂಠಿತವಾಗಿತ್ತು. ನಮ್ಮ ಸರ್ಕಾರ ಬಂದ ಮೇಲೆ ಅಭಿವೃದ್ಧಿ ಕೆಲಸ ಆಗಿವೆ. ಇದು ಜನರಿಗೂ ಗೊತ್ತಿದೆ, ದಾಖಲೆಗಳೂ ಹೇಳುತ್ತವೆ ಎಂದು ತಿರುಗೇಟು ಕೊಟ್ಟಿದ್ದಾರೆ.

ಇಂದು ಬಿಜೆಪಿ ಸೇರಲಿದ್ದಾರೆ ಹಿರಿಯ ನಟ ಅನಂತನಾಗ್

ಇನ್ನೊಬ್ಬರ ಕೆಲಸಕ್ಕೆ ಕ್ರೆಡಿಟ್ ತೆಗೆದುಕೊಳ್ಳುವ ದುರ್ಬುದ್ಧಿಯಾಗಲಿ, ಕೆಲಸವನ್ನೇ ಮಾಡದೇ ನಾನೇ ಮಾಡಿದ್ದು ಎನ್ನುವ ಕುಬುದ್ಧಿಯಾಗಲಿ ನನ್ನಲ್ಲಿಲ್ಲ. ನೇರ ನುಡಿ, ಅಭಿವೃದ್ಧಿಪರ ರಾಜಕಾರಣ ನನ್ನದು ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ.

ಆರತಕ್ಷತೆಗೆ ಮುನ್ನವೇ ನವವಿವಾಹಿತ ದಂಪತಿ ಸಾವು

ಹಾರೋಹಳ್ಳಿ ಪ್ರತ್ಯೇಕ ತಾಲೂಕು ರಚನೆಯಲ್ಲಿ ಕುಮಾರಸ್ವಾಮಿ ಅವರ ಕೊಡುಗೆಯ ಬಗ್ಗೆ ವೇದಿಕೆಯಲ್ಲಿ ಹೇಳಿದ್ದೇನೆ. ಇನ್ನೊಬ್ಬರ ಕೆಲಸಕ್ಕೆ ಕ್ರೆಡಿಟ್ ತೆಗೆದುಕೊಳ್ಳುವ ದುರ್ಬುದ್ಧಿಯಾಗಲಿ, ಕೆಲಸವನ್ನೇ ಮಾಡದೇ ನಾನೇ ಮಾಡಿದ್ದು ಎನ್ನುವ ಕುಬುದ್ಧಿಯಾಗಲಿ ನನ್ನಲ್ಲಿಲ್ಲ. ನೇರ ನುಡಿ, ಅಭಿವೃದ್ಧಿಪರ ರಾಜಕಾರಣ ನನ್ನದು ಟ್ವೀಟ್ ಮಾಡಿ ಅನಿತಾ ಕುಮಾರಸ್ವಾಮಿ ವಿರುದ್ಧ ಗುಡುಗಿದ್ದಾರೆ.

Anitha Kumaraswamy, Harohalli, protocol, violation, Ashwath Narayan,

Articles You Might Like

Share This Article