Sunday, September 8, 2024
Homeಜಿಲ್ಲಾ ಸುದ್ದಿಗಳು | District Newsಇತ್ತೀಚಿಗೆ ಕೊಲೆಯಾದ ಅಂಜಲಿ ಸಹೋದರಿ ಯಶೋಧಾ ಆತಹತ್ಯೆಗೆ ಯತ್ನ

ಇತ್ತೀಚಿಗೆ ಕೊಲೆಯಾದ ಅಂಜಲಿ ಸಹೋದರಿ ಯಶೋಧಾ ಆತಹತ್ಯೆಗೆ ಯತ್ನ

ಹುಬ್ಬಳ್ಳಿ, ಮೇ 19- ಕೊಲೆಯಾದ ಅಂಜಲಿ ಅಂಬಿಗೇರ ಸಹೋದರಿ ಯಶೋದಾ ಅಕ್ಕನ ಸಾವಿನಿಂದ ಮನನೊಂದು ಫಿನಾಯಿಲ್‌ ಸೇವಿಸಿ ಆತಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಅವರನ್ನು ಕಿಮ್ಸ್‌‍ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಯಶೋದಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ ನಿನ್ನೆ ಅಂಬಿಗರ ಚೌಡಯ್ಯ ಪೀಠದ ಶ್ರೀ ಶಾಂತಭೀಷ ಸ್ವಾಮೀಜಿ, ದಿಂಗಾಲೇಶ್ವರ ಶ್ರೀ, ಮನಸೂರಿನ ಬಸವರಾಜ ದೇವರು ಶ್ರೀ ಸೇರಿದಂತೆ ವಿವಿಧ ಮಠಾಧೀಶರು ಮತ್ತು ಸಾರ್ವಜನಿಕರು ಹುಬ್ಬಳ್ಳಿಯ ಚೆನ್ನಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಪ್ರತಿಭಟನೆ ನಡೆಸಿದ್ದರು.

ಈ ಪ್ರತಿಭಟನೆಯಲ್ಲಿ ಯಶೋದಾ ಕೂಡ ಭಾಗಿಯಾಗಿದ್ದರು. ಪ್ರತಿಭಟನೆ ವೇಳೆ ಯಶೋದಾ ಪ್ರಜ್ಞೆ ತಪ್ಪಿ ಬಿದ್ದಿದ್ದರು. ಕೂಡಲೆ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿತ್ತು. ಮನೆಗೆ ಹೋದ ಯಶೋದಾ ರಾತ್ರಿ ಫಿನಾಯಿಲ್‌ ಸೇವಿಸಿ ಆತಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ.

RELATED ARTICLES

Latest News