ಮುಂಬೈ,ಫೆ.6- ಸೂಪರ್ ಮಾರ್ಕೆಟ್ ಮತ್ತು ವಾಕ್-ಇನ್ ಶಾಪ್‍ಗಳಲ್ಲಿ ವೈನ್ ಮಾರಾಟಕ್ಕೆ ಅವಕಾಶ ನೀಡುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಅನಿರ್ದಿಷ್ಟಾವ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ಸಾಮಾಜಿಕ ಕಾರ್ಯಕರ್ತರ ಅಣ್ಣಾ ಹಜಾರೆ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ದವ್ ಠಾಕ್ರೆಗೆ ಪತ್ರ ಬರೆದು ಎಚ್ಚರಿಕೆ ನೀಡಿದ್ದಾರೆ.
ರಾಜ್ಯ ಸರ್ಕಾರ ಇತ್ತೀಚೆಗೆ ಸೂಪರ್ ರ್ಮಾರ್ಕೆಟ್ ಮತ್ತು ದಿನಸಿ ಅಂಗಡಿಗಳಲ್ಲಿ ವೈನ್ ಮಾರಾಟಕ್ಕೆ ಅನುಮತಿ ನೀಡಲು ನಿರ್ಧರಿಸಿದೆ. ಈ ನಿರ್ಧಾರವು ರಾಜ್ಯದ ದುರದೃಷ್ಟಕರ ಮತ್ತು ಮುಂದಿನ ಪೀಳಿಗೆಗೆ ಅಪಾಯಕಾರಿಯಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ಈ ನಿರ್ಧಾರವನ್ನು ವಿರೋಧಿಸಲು, ನಾನು ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಿದೆ. ಈ ಕುರಿತು ನಾನು ಸಿಎಂ ಮತ್ತು ಉಪ ಮುಖ್ಯಮಂತ್ರಿ (ಅಜಿತ್ ಪವಾರ್) ಅವರಿಗೆ ಪತ್ರ ಕಳುಹಿಸಿದ್ದೆ ಆದರೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಹಜಾರೆ ಹೇಳಿದ್ದಾರೆ.
ವೈನ್ ಮಾರಾಟದ ನಿರ್ಧಾರದ ವಿರುದ್ಧ ಮಹಾರಾಷ್ಟ್ರದಲ್ಲಿ ಏಕಕಾಲದಲ್ಲಿ ಆಂದೋಲನ ನಡೆಸಲಾಗುವುದು ಎಚ್ಚರಿಕೆ ನೀಡಿದ್ದಾರೆ.
ವೈನ್ ನೀತಿಯನ್ನು ವಿರೋಧಿಸಿ ಈಗಾಗಲೇ ಫೆ.3ರಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೇನೆ. ಆದರೆ ರಾಜ್ಯ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ಜ್ಞಾಪನೆ ಪತ್ರವನ್ನು ಕಳುಹಿಸಿದ್ದೇನೆ ಎಂದು ಹಜಾರೆ ತಿಳಿಸಿದ್ದಾರೆ.
