ಈ ಬಾರಿ ಮಾರ್ಚ್-ಏಪ್ರಿಲ್‌ನಲ್ಲೇ ನಡೆಯಲಿವೆ ವಾರ್ಷಿಕ ಪರೀಕ್ಷೆಗಳು

Social Share

ಬೆಂಗಳೂರು,ಸೆ.26-ಕೋವಿಡ್ ಕಾರಣದಿಂದ ಕಳೆದ ವರ್ಷ 2021-22ರ ಜೂನ್-ಜುಲೈನಲ್ಲಿ ವಾರ್ಷಿಕ ಪರೀಕ್ಷೆಗಳು ನಡೆದಿತ್ತು. ಈ ವರ್ಷದಿಂದ ಈ ಹಿಂದೆ ಇದ್ದಂತೆ ಮಾರ್ಚ್-ಏಪ್ರಿಲ್ನಲ್ಲೇ ಪರೀಕ್ಷೆಗಳು ನಡೆಯಲಿವೆ.

ಕರ್ನಾಟಕ ಸರ್ಕಾರ ಹೊರಡಿಸಿದ ಹೊಸ ಮಾರ್ಗಸೂಚಿಗಳ ಪ್ರಕಾರ, ಎಸ್ಎಸ್ಎಲ್ಸಿ ಪರೀಕ್ಷೆಗಳು ಹಿಂದಿನ ಮಾದರಿಗೆ ಮರಳಲಿದೆ. ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಸರಿಯಾಗಿ ಪಾಠಗಳು ನಡೆಯದಿದ್ದುದರಿಂದ ಕಳೆದ ಎರಡು ವರ್ಷ ಬಹು ಆಯ್ಕೆಯ ಪ್ರಶ್ನೆಗಳನ್ನು ನೀಡಲಾಗಿತ್ತು.ಆದರೆ ಈ ವರ್ಷದಿಂದ 10ನೇ ತರಗತಿ ವಿದ್ಯಾರ್ಥಿಗಳು ಹಿಂದಿನ ಮಾದರಿಗೆ ಮರಳಬೇಕಾಗಿದೆ.

ಪ್ರಬಂಧ-ಮಾದರಿಯ ಪ್ರಶ್ನೆಗಳಿಗೆ ವಿವರವಾದ ಉತ್ತರಗಳನ್ನು ಇನ್ನು ಮುಂದೆ ನೀಡಬೇಕು. ಪಠ್ಯಕ್ರಮವನ್ನು ಕಡಿತಗೊಳಿಸುವ ನಿರ್ಧಾರವೂ ಹಿಂಪಡೆಯಲಿದ್ದು, ವಿದ್ಯಾರ್ಥಿಗಳು ಸಂಪೂರ್ಣ ಪಠ್ಯಕ್ರಮವನ್ನು ಅಧ್ಯಯನ ಮಾಡಬೇಕಾಗುತ್ತದೆ.

ಇದನ್ನೂ ಓದಿ : ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಷ್ಟ್ರಪತಿಗಳಿಂದ ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ

ಜತೆಗೆ ವರ್ಷದಲ್ಲಿ ಸಾಕಷ್ಟು ವಿವಾದಕ್ಕೆ ಕಾರಣವಾಗಿರುವ ಪರಿಷ್ಕೃತ ಪಠ್ಯಪುಸ್ತಕಗಳೂ ವಿದ್ಯಾರ್ಥಿಗಳಿಗೆ ಕಲಿಸುವ ಪಠ್ಯಕ್ರಮದ ಭಾಗವಾಗಲಿದೆ.ಕೋವಿಡ್ ಕಾರಣದಿಂದ ಕಳೆದ ವರ್ಷ 2021-22ರ ಜೂನ್-ಜುಲೈನಲ್ಲಿ ನಡೆದಿದ್ದ ವಾರ್ಷಿಕ ಪರೀಕ್ಷೆಗಳು ಈ ವರ್ಷದಿಂದ ಮಾರ್ಚ್-ಏಪ್ರಿಲ್ನಲ್ಲೇ ನಡೆಯಲಿದೆ.

ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಶೇ.75ರಷ್ಟು ಹಾಜರಾತಿ ಕಡ್ಡಾಯವಾಗಿರುತ್ತದೆ. 2019-2020ರ ಎಸ್ಎಸ್ಎಲ್ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಸ್ವರೂಪವನ್ನು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ (2022-23) ಯಾವುದೇ ಬದಲಾವಣೆಗಳಿಲ್ಲದೆ ಅನುಸರಿಸಲಾಗುವುದು ಎಂದು ಮಾರ್ಗಸೂಚಿಗಳು ತಿಳಿಸಿವೆ.

ಪುನರಾವರ್ತಿತ ವಿದ್ಯಾರ್ಥಿಗಳು ಈ ವರ್ಷ ನಿಗದಿಪಡಿಸಿದ ಸಂಪೂರ್ಣ ಪಠ್ಯಕ್ರಮವನ್ನು ಅಧ್ಯಯನ ಮಾಡಬೇಕಾಗುತ್ತದೆ ಎಂದು ಸರ್ಕಾರದ ಮಾರ್ಗಸೂಚಿ ತಿಳಿಸಿದೆ.

Articles You Might Like

Share This Article