ಬೆಂಗಳೂರು, ಜ.18- ಮುಂದೆ ಹೋಗುತ್ತಿದ್ದ ಸ್ಕೂಟರ್ಗೆ ಹಿಂದಿನಿಂದ ಅತಿ ವೇಗವಾಗಿ ಬಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.
ವಿಜಯನಗರದ ನಿವಾಸಿ ಕುಲದೀಪ್ ಬಗರೇಚಾ(31) ಮೃತಪಟ್ಟ ಸ್ಕೂಟರ್ ಸವಾರ. ಉದ್ಯಮಿಯಾಗಿದ್ದ ಕುಲದೀಪ್ ಅವರು ಇಂದು ಮಧ್ಯಾಹ್ನ 12.30ರ ಸುಮಾರಿನಲ್ಲಿ ತಮ್ಮ ಸ್ಕೂಟರ್ನಲ್ಲಿ ಸುಮನಹಳ್ಳಿ ಬ್ರಿಡ್ಜ್ ಬಳಿ ಹೋಗುತ್ತಿದ್ದಾಗ ಹಿಂದಿನಿಂದ ಅತಿ ವೇಗವಾಗಿ ಬಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ.
ಒಂದೇ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ ಸಿದ್ದರಾಮಯ್ಯ
ಡಿಕ್ಕಿಯ ರಭಸಕ್ಕೆ ಕೆಳಗೆ ಬಿದ್ದ ಕುಲದೀಪ್ ಅವರ ತಲೆಗೆ ಪೆಟ್ಟಾಗಿದ್ದಲ್ಲದೆ ಅವರ ಕೈ ಮೇಲೆ ಬಸ್ ಚಕ್ರ ಹರಿದಿದೆ. ಗಂಭೀರ ಗಾಯಗೊಂಡ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಕಾಮಾಕ್ಷಿಪಾಳ್ಯ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಬಸ್ ಚಾಲಕನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಅಪಘಾತದಿಂದಾಗಿ ಕೆಲ ಕಾಲ ಈ ಮಾರ್ಗದಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು. ತಕ್ಷಣ ಸಂಚಾರಿ ಪೊಲೀಸರು ಸ್ಥಳದಲ್ಲಿದ್ದು ಸುಗಮಸಂಚಾರಕ್ಕೆ ಅನುವು ಮಾಡಿಕೊಟ್ಟರು.
#Biker, #killed, #BMTC, #BMTCBus,