ನವದೆಹಲಿ, ಡಿ 20 (ಪಿಟಿಐ) ರಾಷ್ಟ್ರ ರಾಜಧಾನಿಯ ಶಾಲೆಗಳಿಗೆ ಬರುತ್ತಿರುವ ಹುಸಿ ಬಾಂಬ್ ಬೆದರಿಕೆ ಕರೆಗಳು ನಿಲ್ಲುವಂತೆ ಕಾಣುತ್ತಿಲ್ಲ.ದೆಹಲಿಯ ಪ್ರಮುಖ ಶಾಲೆಯೊಂದಕ್ಕೆ ಮತ್ತೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಭದ್ರತಾ ಸಿಬ್ಬಂದಿಗಳು ಅದರ ಆವರಣದಲ್ಲಿ ಶೋಧ ಕಾರ್ಯಾಚರಣೆ ನಡೆಸುವಂತೆ ಶುಕ್ರವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸೆಕ್ಟರ್ 23 ರ ಡಿಪಿಎಸ್, ದ್ವಾರಕಾದಿಂದ ಬೆಳಿಗ್ಗೆ 5:02 ಕ್ಕೆ ಬಾಂಬ್ ಬೆದರಿಕೆಯ ಕುರಿತು ನಮಗೆ ಕರೆ ಬಂದಿತು ಎಂದು ದೆಹಲಿ ಅಗ್ನಿಶಾಮಕ ಸೇವೆಗಳ (ಡಿಎಫ್ಎಸ್) ಅಧಿಕಾರಿ ತಿಳಿಸಿದ್ದಾರೆ.
ಪೊಲೀಸ್, ಅಗ್ನಿಶಾಮಕ ದಳ, ಬಾಂಬ್ ಪತ್ತೆ ತಂಡಗಳು ಮತ್ತು ಶ್ವಾನ ದಳ ಶೋಧ ಕಾರ್ಯದಲ್ಲಿ ಭಾಗವಹಿಸುತ್ತಿದೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.
ಕಳೆದ 11 ದಿನಗಳಲ್ಲಿ ರಾಷ್ಟ್ರ ರಾಜಧಾನಿಯ ಶಾಲೆಗಳಿಗೆ ಇಂತಹ ಬೆದರಿಕೆಗಳು ಬಂದಿರುವುದು ಇದು ಆರನೇ ಬಾರಿಯಾಗಿದೆ.