Monday, November 24, 2025
Homeಬೆಂಗಳೂರುಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಕೊಲೆ

ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಕೊಲೆ

ಬೆಂಗಳೂರು, ಮೇ 19- ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನೊಬ್ಬನನ್ನು ಕೊಲೆ ಮಾಡಿರುವ ಘಟನೆ ರಾತ್ರಿ ಸಿಟಿ ಮಾರ್ಕೆಟ್‌ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕೊಲೆಯಾದ ಯುವಕನ ಹೆಸರು, ವಿಳಾಸ ಸದ್ಯಕ್ಕೆ ತಿಳಿದುಬಂದಿಲ್ಲ. ರಾತ್ರಿ ಸಿಟಿ ಮಾರ್ಕೆಟ್‌ ಕಾಂಪ್ಲೆಕ್‌್ಸ ಹಿಂಭಾಗ ಜಿಪಿ ಸ್ಟ್ರೀಟ್‌ನ ಅಂಗಡಿಯೊಂದರ ಮುಂದೆ ಯುವಕನನ್ನು ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಸುದ್ದಿ ತಿಳಿದ ಪೊಲೀಸರು ಸ್ಥಳಕ್ಕೆ ದಾವಿಸಿ ಶವವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿ ಕೊಲೆ ಪ್ರಕರಣ ದಾಖಲಿಸಿಕೊಂಡು ಕೊಲೆಯಾಗಿರುವ ಯುವಕ ಯಾರು, ಯಾವ ಉದ್ದೇಶಕ್ಕಾಗಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ ಎಂಬ ಬಗ್ಗೆ ಮುಂದಿನ ತನಿಖೆ ಕೈಗೊಂಡಿದ್ದಾರೆ.

ಯುವಕನ ಹೆಸರು, ವಿಳಾಸ ಪತ್ತೆಹಚ್ಚಲು ಕೊಲೆಯಾದ ಸ್ಥಳದ ಸುತ್ತಮುತ್ತಲಿನ ರಸ್ತೆಗಳಲ್ಲಿನ ಸಿಸಿಟಿವಿ ಫುಟೇಜ್‌ಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

RELATED ARTICLES
- Advertisment -

Latest News