ಬೆಂಗಳೂರು : ಸಂಚಾರ ನಿಯಮ ಉಲ್ಲಂಘಿಸಿ ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರಿಗೆ ಮತ್ತೊಂದು ಅವಕಾಶವನ್ನು ಸಾರಿಗೆ ಇಲಾಖೆ ನೀಡಿದೆ.
ಪೊಲೀಸ್ ಇಲಾಖೆಯ ಸಂಚಾರಿ ಇ-ಚನಲ್ ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇ. 50ರಷ್ಟು ರಿಯಾಯಿತಿ ನೀಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ಈ ರಿಯಾಯಿತಿಯು ಮಾರ್ಚ್ 4 ರಿಂದ ಅನ್ವಯವಾಗಲಿದ್ದು 15 ದಿನಗಳ ಒಳಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗಲಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿಗಾಗಿ ವಿದ್ಯಾರ್ಥಿನಿಯರ ಮನವಿ
ಪೊಲೀಸ್ ಇಲಾಖೆ ಸಂಚಾರಿ ಇ-ಚನಲ್ ನಲ್ಲಿ ಫೆಬ್ರವರಿ 11ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ರಿಯಾಯಿತಿ ಅನ್ವಯವಾಗಲಿದೆ. ಈಗಾಗಲೇ ಒಂದು ಬಾರಿ ಹಳೆಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಶೇ. 50 ರಷ್ಟು ರಿಯಾಯಿತಿ ನೀಡಲಾಗಿತ್ತು.
ಆ ಅವಧಿಯಲ್ಲಿ ಸವಾರರು ದಂಡ ಪಾವತಿಸಲು ಮುಗಿಬಿದ್ದಿದ್ದರು . ಇನ್ನೂ ಬಹಳಷ್ಟು ಮಂದಿ ದಂಡ ಪಾವತಿ ಮಾಡಿರಲಿಲ್ಲ. ಹೀಗಾಗಿ ಮತ್ತೊಂದು ದಂಡದಲ್ಲಿ ರಿಯಾಯಿತಿಯ ಅವಕಾಶ ನೀಡುವಂತೆ ಸಾರ್ವಜನಿಕರಿಂದ ಒತ್ತಾಯವೂ ಕೇಳಿಬಂದಿತ್ತು .
#AnotherOpportunity, #pay, #trafficfines, #50%discount,