ಬೆಂಗಳೂರು,ಡಿ.4– ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ನಿಯಮ ಉಲ್ಲಂಘಿಸಿ ನಿವೇಶನ ಹಂಚಿಕೆ ಮಾಡಲಾಗಿದೆ ಎಂಬುದನ್ನು ಜಾರಿ ನಿದೇರ್ಶನಾಲಯ (ಇ.ಡಿ.)ಪತ್ತೆ ಹಚ್ಚಿದೆ.
ಇದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರುವ ದಿನಗಳಲ್ಲಿ ಬಹುದೊಡ್ಡ ಕಾನೂನಿನ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಮುಡಾದಿಂದ 14 ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ ಅವರಿಗೆ ಹಸ್ತಾಂತರಿಸಿರುವ ಪ್ರಕರಣದಲ್ಲಿ ಹಲವು ಅಕ್ರಮಗಳು ನಡೆದಿರುವ ಬಗ್ಗೆ ಪುರಾವೆಗಳು ಸಿಕ್ಕಿವೆ ಎಂದು ಇ.ಡಿ. ತಿಳಿಸಿದೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಕಳುಹಿಸಲಾದ ವರದಿಯಲ್ಲಿ ಇಡಿ ಲೋಕಾಯುಕ್ತರಿಗೆ ಮಾಹಿತಿ ನೀಡಿದೆ, ಸೈಟ್ ಹಂಚಿಕೆಯಲ್ಲಿ ಶಾಸನಬದ್ಧ ಮಾರ್ಗಸೂಚಿಗಳನ್ನು ಉಲ್ಲಂಘಿಸಿ 14 ಸೈಟ್ಗಳನ್ನು ಪಾರ್ವತಿಗೆ ಕಾನೂನುಬಾಹಿರವಾಗಿ ಹಂಚಲಾಗಿದೆ ಎಂದು ಸ್ಪಷ್ಟವಾಗಿ ಉಲ್ಲೇಖ ಮಾಡಿದೆ.
ಕೇಂದ್ರ ತನಿಖಾ ಸಂಸ್ಥೆ ಪ್ರಕರಣ ಸಂಬಂಧ ಕರ್ನಾಟಕ ಲೋಕಾಯುಕ್ತ ಇಲಾಖೆಗೆ ಇತ್ತೀಚೆಗೆ ಕಳುಹಿಸಿದ ಸಂವಹನದಲ್ಲಿ, ಮುಡಾ ಒಟ್ಟು 1,095 ಸೈಟ್ಗಳನ್ನು ಬೇನಾಮಿ ಮತ್ತು ಇತರ ವಹಿವಾಟುಗಳಲ್ಲಿ ಅಕ್ರಮವಾಗಿ ಮಂಜೂರು ಮಾಡಿದೆ ಎಂಬುದು ತನ್ನ ತನಿಖೆಯಲ್ಲಿ ಕಂಡುಬಂದಿದೆ ಎಂದು ಹೇಳಿಕೊಂಡಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ವೇಳೆ, ಭೂಪರಿವರ್ತನೆಯಲ್ಲಿ ಕಾನೂನುಬದ್ಧ ಮಾರ್ಗಸೂಚಿಗಳ ಉಲ್ಲಂಘನೆ, ಕಚೇರಿಯ ಕಾರ್ಯವಿಧಾನಗಳ ಉಲ್ಲಂಘನೆ, ಅನಾವಶ್ಯಕ ಕೃಪಾಕಟಾಕ್ಷ ಮತ್ತು ಪ್ರಭಾವದ ಬಳಕೆ ಹಾಗೂ ಸಹಿಗಳ ಫೋರ್ಜರಿಗೆ ಸಾಕ್ಷ್ಯಾಧಾರಗಳು ಪತ್ತೆಯಾಗಿವೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.
ಸಿದ್ದರಾಮಯ್ಯ ಅವರ ಆಪ್ತ ಸಹಾಯಕರಲ್ಲಿ ಒಬ್ಬರಾದ ಎಸ್.ಜಿ.ದಿನೇಶ್ ಕುಮಾರ್ ಅಲಿಯಾಸ್ ಸಿ.ಟಿ.ಕುಮಾರ್ ಅವರು ಈ ಪ್ರಕ್ರಿಯೆಯಲ್ಲಿ ಅನಗತ್ಯ ಪ್ರಭಾವ ಬೀರಿದ್ದಾರೆ ಎಂಬುದಕ್ಕೆ ಪುರಾವೆಗಳು ಸಿಕ್ಕಿವೆ ಎಂದು ಇ.ಡಿ. ಹೇಳಿಕೊಂಡಿದೆ.
ಮುಡಾದಲ್ಲಿ ಆಪಾದಿತ ಅಕ್ರಮ ಚಟುವಟಿಕೆಗಳು ಪಾರ್ವತಿ ಪ್ರಕರಣದೊಂದಿಗೆ ಕೊನೆಗೊಂಡಿಲ್ಲ. 700 ಕೋಟಿ ರೂ.ಗಿಂತ ಹೆಚ್ಚು ಮಾರುಕಟ್ಟೆ ಮೌಲ್ಯದ ಒಟ್ಟು 1,095 ಸೈಟ್ಗಳನ್ನು ಕಾನೂನುಬಾಹಿರವಾಗಿ ಹಂಚಿಕೆ ಮಾಡಲಾಗಿದೆ ಎಂದು ಇ.ಡಿ. ತನಿಖಾ ವರದಿ ಮತ್ತು ಅಧಿಕೃತ ಮೂಲಗಳು ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.
ಮುಡಾ ಒಟ್ಟು 1,095 ಸೈಟ್ಗಳನ್ನು ಬೇನಾಮಿ ಮತ್ತು ಇತರ ವಹಿವಾಟುಗಳಲ್ಲಿ ಕಾನೂನುಬಾಹಿರವಾಗಿ ಹಂಚಿಕೆ ಮಾಡಿದೆ ಎಂದು ತನ್ನ ತನಿಖೆಯಲ್ಲಿ ಕಂಡುಬಂದಿದೆ ಎಂದು ಹೇಳಿಕೊಂಡಿದೆ. ಪಾರ್ವತಿ ಅವರಿಗೆ ಭೂ ಪರಿವರ್ತನೆಯಲ್ಲಿ ಶಾಸನಬದ್ಧ ಮಾರ್ಗಸೂಚಿಗಳ ಉಲ್ಲಂಘನೆಯಾಗಿದೆ.
ಕಾರ್ಯವಿಧಾನಗಳ ಉಲ್ಲಂಘನೆ, ಅನಾವಶ್ಯಕ ಒಲವು ಪ್ರಭಾವದ ಬಳಕೆ ಮತ್ತು ಫೋರ್ಜರಿ ಸಹಿಗಳ ಸಾಕ್ಷ್ಯಗಳು ಪತ್ತೆಯಾಗಿವೆ ಎಂದು ಇ.ಡಿ. ಹೇಳಿದೆ.ಸಿದ್ದರಾಮಯ್ಯ ಅವರ ಆಪ್ತ ಸಹಾಯಕರಲ್ಲಿ ಒಬ್ಬರಾದ ಎಸ್.ಜಿ.ದಿನೇಶ್ ಕುಮಾರ್ ಅಲಿಯಾಸ್ ಸಿ.ಟಿ.ಕುಮಾರ್ ಅವರು ಈ ಪ್ರಕ್ರಿಯೆಯಲ್ಲಿ ಅನಗತ್ಯ ಪ್ರಭಾವ ಬೀರಿದ್ದಾರೆ ಎಂಬುದಕ್ಕೆ ಪುರಾವೆಗಳು ಸಿಕ್ಕಿವೆ ಎಂದು ಹೇಳಿಕೊಂಡಿದೆ.
ಮುಡಾದಲ್ಲಿ ಆಪಾದಿತ ಅಕ್ರಮ ಚಟುವಟಿಕೆಗಳು ಪಾರ್ವತಿ ಪ್ರಕರಣದೊಂದಿಗೆ ಅಂತ್ಯವಾಗಿಲ್ಲ. 1,095 ಸೈಟ್ಗಳನ್ನು 700 ಕೋಟಿ ರೂ.ಗಿಂತ ಹೆಚ್ಚು ಮಾರುಕಟ್ಟೆ ಮೌಲ್ಯದೊಂದಿಗೆ ಕಾನೂನುಬಾಹಿರವಾಗಿ ಹಂಚಲಾಗಿದೆ ಎಂಬುದನ್ನು ಪತ್ತೆ ಮಾಡಿದೆ. ಭೂ ಕಬಳಿಕೆದಾರರ ಸೋಗಿನಲ್ಲಿ ಬೇನಾಮಿ ಅಥವಾ ಡಮಿ ವ್ಯಕ್ತಿಗಳ ಹೆಸರಿನಲ್ಲಿ ಹೆಚ್ಚಿನ ಹಂಚಿಕೆ ಮಾಡಲಾಗಿದೆ. ಆದಾಗ್ಯೂ, ಈ ಅಕ್ರಮ ಹಂಚಿಕೆಗಳ ಫಲಾನುಭವಿಗಳು ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಪ್ರಭಾವಿ ವ್ಯಕ್ತಿಗಳು ಎಂಬುದು ಜಾರಿ ನಿರ್ದೇಶನಾಲಯದ ತನಿಖೆಯ ವೇಳೆ ಕಂಡುಬಂದಿದೆ.