Saturday, April 5, 2025
Homeರಾಷ್ಟ್ರೀಯ | Nationalಬಿಜೆಪಿ ಸೇರಿದ ಅನುಪಮಾ ಖ್ಯಾತಿಯ ನಟಿ ರೂಪಾಲಿ ಗಂಗೂಲಿ

ಬಿಜೆಪಿ ಸೇರಿದ ಅನುಪಮಾ ಖ್ಯಾತಿಯ ನಟಿ ರೂಪಾಲಿ ಗಂಗೂಲಿ

ನವದೆಹಲಿ,ಮೇ1- ಅನುಪಮಾ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಪಕ್ಷದ ಮುಖಂಡರಾದ ವಿನೋದ್‌ ತಾವ್ಡೆ ಮತ್ತು ಅನಿಲ್‌ ಬಲುನಿ ಅವರ ಉಪಸ್ಥಿತಿಯಲ್ಲಿ ಇಂದು ಅವರು ಬಿಜೆಪಿಗೆ ಸೇರಿದ್ದಾರೆ.

ಬಿಜೆಪಿಗೆ ಸೇರ್ಪಡೆಯಾದ ನಂತರ ಮಾತನಾಡಿದ ಅವರು, ಪ್ರಧಾನಿ ನರೇಂದ್ರಮೋದಿಯವರ ನೇತೃತ್ವದಲ್ಲಿ ದೇಶದಲ್ಲಿನ ಅಭಿವೃದ್ಧಿಯಿಂದಾಗಿ ನಾನು ಬಿಜೆಪಿಗೆ ಸೇರಿದ್ದೇನೆ ಎಂದು ತಿಳಿಸಿದ್ದಾರೆ. ಬಿಜೆಪಿಯ ಅಭಿವೃದ್ಧಿಯ ಈ ಮಹಾಯಜ್ಞವನ್ನು ನೋಡಿದಾಗ ನನಗೂ ಇದರಲ್ಲಿ ಪಾಲ್ಗೊಳ್ಳಬೇಕು ಎಂದು ಅನಿಸುತ್ತದೆ. ನಾನು ಏನೇ ಮಾಡಿದರೂ ಸರಿಯಾಗಿ, ಒಳ್ಳೆಯದನ್ನು ಮಾಡುವಂತೆ ನಿಮ್ಮೆಲ್ಲರ ಆಶೀರ್ವಾದ ಮತ್ತು ಬೆಂಬಲ ಬೇಕು ಎಂದು ಅವರು ಹೇಳಿದ್ದಾರೆ.

ಈ ಮಾರ್ಚ್‌ನಲ್ಲಿ ರೂಪಾಲಿ ಪ್ರಧಾನಿ ಮೋದಿಯವರನ್ನು ಭೇಟಿಯಾಗಿದ್ದರು, ಬಳಿಕ ಇದು ನನ್ನ ಜೀವನದ ಅತ್ಯಂತ ಸ್ಮರಣೀಯ ದಿನ, ಎಂದೂ ಮರೆಯಲು ಸಾಧ್ಯವಾಗದು, ಮೋದಿಯವರನ್ನು ಭೇಟಿಯಾಗುವ ಕನಸು ನನಸಾಯಿತು ಎಂದು ಬರೆದಿದ್ದರು.

ನಟರಾದ ಕಂಗನಾ ರಣಾವತ್‌, 6 ಬಾರಿ ಮಧ್ಯಪ್ರದೇಶದ ಶಾಸಕ ರಾಮ್‌ನಿವಾಸ್‌ ರಾವತ್‌ ಮತ್ತು ಪ್ರಿಯಾಂಕಾ ಗಾಂಧಿ ಅವರ ಆಪ್ತ ಸಹಾಯಕ ತಜೀಂದರ್‌ಭಿಟ್ಟು ಈ ವರ್ಷ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

RELATED ARTICLES

Latest News