ಬೆಂಗಳೂರು,ಜು.17- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರನಟ ದರ್ಶನ್ ಹಾಗೂ ಇತರ ಆರೋಪಿಗಳಿಗೆ ಹೈಕೋರ್ಟ್ ನೀಡಿರುವ ಜಾಮೀನು ರದ್ದುಪಡಿಸುವಂತೆ ಸಲ್ಲಿಸಿರುವ ಮೇಲನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ಜು.22ಕ್ಕೆ ಮುಂದೂಡಿದೆ.
ಮುಂದುವರೆದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ಪಾರ್ದ್ರಿವಾಲಾ ನೇತೃತ್ವದ ದ್ವಿ ಸದಸ್ಯ ಪೀಠವು ಚಿತ್ರನಟ ದರ್ಶನ್ ಹಾಗೂ ಇತರೆ ಆರೋಪಿಗಳನ್ನು ಬಂಧಿಸಿರುವುದಕ್ಕೆ ಕಾರಣಗಳನ್ನು ಮಾತ್ರ ಹೇಳಿ. ನಾವು ಬೇರೆ ಯಾವುದನ್ನೂ ಕೇಳುತ್ತಿಲ್ಲ ಎಂದು ಅರ್ಜಿ ವಿಚಾರಣೆಯನ್ನು ಮುಂದೂಡಿತ್ತು.
ದರ್ಶನ್ ಹಾಗೂ ಆರೋಪಿಗಳ ಬಂಧನ ಕಾನೂನುಬದ್ಧವಾಗಿಲ್ಲ ಎನ್ನುವುದಾದರೆ ಅದಕ್ಕೆ ಉತ್ತರ ಕೊಡಿ ಎಂದು ಸರ್ಕಾರದ ಪರ ವಕೀಲರಿಗೆ ನ್ಯಾಯಾಲಯ ಸೂಚನೆ ನೀಡಿ ಜು.22 ಕ್ಕೆ ಅರ್ಜಿ ವಿಚಾರಣೆಯನ್ನು ನಿಗದಿಪಡಿಸಿದೆ.ಸರ್ಕಾರದ ಪರ ಹಾಜರಿದ್ದ ಹಿರಿಯ ವಕೀಲ ಸಿದ್ಧಾರ್ಥ್ ಲೂಥಾ ವಾದ ಮಂಡಿಸಿದರು. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ದರ್ಶನ್ ಪರ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ಹಾಜರಿದ್ದರು.
ಮುಂದಿನ ಅರ್ಜಿ ವಿಚಾರಣೆಯಲ್ಲಿ ಮನುಸಿಂಘ್ವಿ ಗೈರುಹಾಜರಾಗಲಿದ್ದು, ಅವರ ಪರ ಮತ್ತೊಬ್ಬ ಹಿರಿಯ ವಕೀಲ ಕಪಿಲ್ ಸಿಬಾಲ್ ಹಾಜರಾಗಲಿದ್ದಾರೆ.ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಗೆಳತಿ ಪವಿತ್ರಗೌಡ, ದರ್ಶನ್ ಸೇರಿದಂತೆ ಹಲವು ಆರೋಪಿಗಳನ್ನು ಬಂಧಿಸಲಾಗಿತ್ತು. ಸುಮಾರು 2 ತಿಂಗಳುಗಳ ಕಾಲ ಎಲ್ಲರೂ ಜೈಲು ಸೇರಿದ್ದರು. ಸುದೀರ್ಘ ವಿಚಾರಣೆ, ವಾದ-ಪ್ರತಿವಾದದ ನಂತರ ಕರ್ನಾಟಕ ಹೈಕೋರ್ಟ್ ಕಳೆದ ಡಿಸೆಂಬರ್‌ನಲ್ಲಿ ಎಲ್ಲಾ ಆರೋಪಿಗಳಿಗೂ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.
ನ್ಯಾಯಾಲಯದಿಂದ ಜಾಮೀನು ಸಿಕ್ಕರೂ ಪ್ರಕರಣದ 7 ಆರೋಪಿಗಳ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲಿಸರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ವಿದೇಶಕ್ಕೆ ತೆರಳಲು ದರ್ಶನ್‌ಗೆ ನ್ಯಾಯಾಲಯ ಷರತ್ತಬದ್ಧ ಜಾಮೀನು ಮಂಜೂರು ಮಾಡಿದ ಬೆನ್ನಲ್ಲೇ ದರ್ಶನ್ ಡೆವಿಲ್ ಚಿತ್ರೀಕರಣಕ್ಕಾಗಿ ಥಾಯ್ಲಾಂಡ್‌ಗೆ ತೆರಳಿದ್ದಾರೆ.
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (18-07-2025)
- ರೌಡಿ ಬಿಕ್ಲುಶಿವ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್
- ನೈರುತ್ಯ ವಿಭಾಗದ ಡಿಸಿಪಿ ಕಚೇರಿ ಕಾರ್ಯಾರಂಭ
- ವೈಭವದಿಂದ ಜರುಗಿದ ಚಾಮುಂಡೇಶ್ವರಿ ವರ್ಧಂತಿ ಉತ್ಸವ
- ಕೊಡಗು, ಉತ್ತರ ಕನ್ನಡದಲ್ಲಿ ಮಳೆ ಅಬ್ಬರ, ಶಾಲೆಗಳಿಗೆ ರಜೆ