ಬೆಂಗಳೂರು, ಮೇ 8-ಸಮಾಜ ಕಲ್ಯಾಣ ಇಲಾಖೆ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮೂಲಕ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಐ.ಎ.ಎಸ್ ಹಾಗೂ ಕೆ.ಎ.ಎಸ್. ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪರೀಕ್ಷೆ ನಡೆಸಲಿದ್ದು, ಇಂದಿನಿಂದ ಅರ್ಹ ಅಭ್ಯರ್ಥಿಗಳು ಆನ್‌ಲೈನ ಮೂಲಕ ಅರ್ಜಿ ಸಲ್ಲಿಸಬಹುದು.
ಇಂದು ಮಧ್ಯಾಹ್ನ 12ರಿಂದ ಮೇ 19ರ ಸಂಜೆ 5 ರವರೆಗೆ ಅರ್ಜಿ ಸಲ್ಲಿಸಬಹುದು. ಕೆಎಇ ಅರ್ಜಿ ಶುಲ್ಕ ಪಾವತಿಸಲು ಮೇ 20 ಸಂಜೆ 5ರವರೆಗೆ ಅವಕಾಶವಿರುತ್ತದೆ ಎಂದು ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಪ್ರಾಧಿಕಾರದ ವೆಬೈಟ್ https://cetonline.karnataka.gov.in/kea ನೋಡಲು ಸೂಚಿಸಲಾಗಿದೆ.