Thursday, September 19, 2024
Homeರಾಜ್ಯ6 ರಂಗಾಯಣಗಳಿಗೆ ನಿರ್ದೇಶಕರ ನೇಮಕ

6 ರಂಗಾಯಣಗಳಿಗೆ ನಿರ್ದೇಶಕರ ನೇಮಕ

ಬೆಂಗಳೂರು : ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರ ನೇಮಕ ಮಾಡಿ ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಚಿವ ಶಿವರಾಜ ತಂಗಡಗಿ ಆದೇಶ ಹೊರಡಿಸಿದ್ದಾರೆ.

ನಿರ್ದೇಶಕರು ಅಧಿಕಾರ ವಹಿಸಿಕೊಂಡ ಕೂಡಲೇ ರಂಗಾಯಣಗಳ ಕಾರ್ಯ ಚಟುವಟಿಕೆಗಳನ್ನು ವೇಗಗತಿಯಲ್ಲಿ ಕೈಗೊಳ್ಳಲು ಹಾಗೂ ರಂಗಭೂಮಿಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸೂಚಿಸಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.

ನಿರ್ದೇಶಕ ಪಟ್ಟಿ :
1.ಮೈಸೂರು ರಂಗಾಯಣದ ನಿರ್ದೇಶಕರಾಗಿ ಶ್ರೀ ಸತೀಶ್ ತಿಪಟೂರು,
2.ಧಾರವಾಡ ರಂಗಾಯಣದ ನಿರ್ದೇಶಕರಾಗಿ ಶ್ರೀ ರಾಜು ತಾಳಿಕೋಟೆ .
3.ಶಿವಮೊಗ್ಗ ರಂಗಾಯಣದ ನಿರ್ದೇಶಕರಾಗಿ ಶ್ರೀ ಪ್ರಸನ್ನ ಡಿ ಸಾಗರ.
4.ಕಲಬುರ್ಗಿ ರಂಗಾಯಣದ ನಿರ್ದೇಶಕರಾಗಿ ಡಾ. ಸುಜಾತ ಜಂಗಮ ಶೆಟ್ಟಿ.
5.ವೃತ್ತಿ ರಂಗಭೂಮಿ ರಂಗಾಯಣ, ದಾವಣಗೆರೆ ಗೆ ನಿರ್ದೇಶಕರಾಗಿ ಶ್ರೀ ಮಲ್ಲಿಕಾರ್ಜುನ ಕಡಕೋಳ.
6.ಯಕ್ಷರಂಗಾಯಣ, ಕಾರ್ಕಳದ ನಿರ್ದೇಶಕರಾಗಿ ಶ್ರೀ ವೆಂಕಟರಮಣ ಐತಾಳ ಇವರನ್ನು ನೇಮಕ ಮಾಡ ಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.

RELATED ARTICLES

Latest News