ಬೆಂಗಳೂರು, ಅ.8-ವಿಧಾನಸಭೆಯ ಮೂರು ವಿವಿಧ ಸ್ಥಾಯಿ ಸಮಿತಿಗಳಿಗೆ ಮೂವರು ಶಾಸಕರನ್ನು ಸದಸ್ಯರನ್ನಾಗಿ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ನಾಮ ನಿರ್ದೇಶನ ಮಾಡಿದ್ದಾರೆ.
ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಸದಸ್ಯರಾಗಿದ್ದ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಅವರನ್ನು ಸ್ಥಳಿಯ ಸಂಸ್ಥೆಗಳು ಮತ್ತು ಪಂಚಾಯತ್ರಾಜ್ ಸಂಸ್ಥೆಗಳ ಸಮಿತಿ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಿದ್ದಾರೆ.
ಸ್ಥಳಿಯ ಸಂಸ್ಥೆಗಳು ಮತ್ತು ಪಂಚಾಯತ್ರಾಜ್ ಸಂಸ್ಥೆಗಳ ಸಮಿತಿ ಸದಸ್ಯರಾಗಿದ್ದ ಶಾಸಕ ಶ್ರೀನಿವಾಸಯ್ಯ ಎನ್.ಅವರನ್ನು ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಸದಸ್ಯರನ್ನಾಗಿ ಸಭಾಧ್ಯಕ್ಷರು ನೇಮಕ ಮಾಡಿದ್ದಾರೆ.
ಸರ್ಕಾರಿ ಭರವಸೆಗಳ ಸಮಿತಿ ಸದಸ್ಯರಾಗಿದ್ದ ಶರಣಗೌಡ ಕಂದಕೂರ ಅವರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಲಾಗಿದೆ ಎಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.