ಬೆಂಗಳೂರು,ಏ.6- ಪ್ರಸಕ್ತ ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ವೀಕ್ಷಕರನ್ನು ನೇಮಕ ಮಾಡಲಾಗಿದೆ. ಬೆಂಗಳೂರು ಕೇಂದ್ರ ಮತ್ತು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ಐಪಿಎಸ್ ಅಧಿಕಾರಿ ಡಾ.ಸಿ.ಎಂ.ತ್ರಿವಿಕ್ರಮ್ ವರ್ಮ ಅವರನ್ನು ಪೊಲೀಸ್ ವೀಕ್ಷಕರನ್ನಾಗಿ ನೇಮಿಸಲಾಗಿದೆ.
ಬೆಂಗಳೂರು ಉತ್ತರ ಮತ್ತು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ಹೇಮಂತ್ ಕುಟಿಯಾಲ್ ಅವರನ್ನು ನೇಮಕ ಮಾಡಲಾಗಿದೆ.ಪೊಲೀಸ್ ಇಲಾಖೆಗೆ ಸಂಬಂಧಿಸಿದ ದೂರುಗಳನ್ನು ಸಾರ್ವಜನಿಕರು ಪೊಲೀಸ್ ವೀಕ್ಷಕರಿಗೆ ಸಲ್ಲಿಸಬಹುದಾಗಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ.
ಡಾ.ಸಿ.ಎನ್.ತ್ರಿವಿಕ್ರಮ್ ವರ್ಮ ಅವರ ಮೊಬೈಲ್ ಸಂಖ್ಯೆ 8904612192 ಮತ್ತು ಹೇಮಂತ್ ಕುಟಿಯಾಲ್ ಅವರ ಮೊಬೈಲ್ ಸಂಖೆ 8296579912 ಆಗಿದ್ದು, ಸಾರ್ವಜನಿಕರು ದೂರುಗಳನ್ನು ಸಲ್ಲಿಸಲು ಈ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.