Monday, October 7, 2024
Homeರಾಜ್ಯನಿಗಮ-ಮಂಡಳಿಗಳಿಗೆ ನೇಮಕ ಇಂದೇ ಪ್ರಕಟ..!

ನಿಗಮ-ಮಂಡಳಿಗಳಿಗೆ ನೇಮಕ ಇಂದೇ ಪ್ರಕಟ..!

ಬೆಂಗಳೂರು,ಜ.18- ರಾಜ್ಯದ 75 ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಿಸುವ ಅಂಗೀಕೃತ ಪಟ್ಟಿ ಇದೇ ದಿನ ಪ್ರಕಟವಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದ ಬಳಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕರ್ತರು ರಾಜ್ಯದಲ್ಲಿ ಪಕ್ಷವನ್ನು ಅಕಾರಕ್ಕೆ ತಂದಿದ್ದಾರೆ. ನೇಮಕಾತಿ ಅವರ ಹಕ್ಕು ಎಂದು ಹೇಳಿದರು. 39 ಮಂದಿ ಕಾರ್ಯಕರ್ತರಿಗೆ ಹಾಗೂ 36 ಜನ ಶಾಸಕರಿಗೆ ಮೊದಲ ಪಟ್ಟಿಯಲ್ಲಿ ನೇಮಕಾತಿ ಮಾಡಲಾಗುವುದು ಎಂದರು.

ನೇಮಕಾತಿಯ ಬೆನ್ನಲ್ಲೇ ಕೆಪಿಸಿಸಿ ಪುನರ್ ರಚನೆಯನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧಪಟ್ಟಂತೆ ನಾಳೆ ಸಂಜೆ 4.30 ಕ್ಕೆ ರಾಜ್ಯ ಚುನಾವಣಾ ಸಮಿತಿಯ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ಯ ಭೇಟಿಗಾಗಿ ಇಂದು ಆಗಮಿಸುತ್ತಿದ್ದಾರೆ. ಹೀಗಾಗಿ ಅವರನ್ನು ಆಹ್ವಾನಿಸಿ ಮುಖ್ಯಮಂತ್ರಿಯವರು, ಸಚಿವರು ಹೋಗಬೇಕಿದೆ. ಜನವರಿ 19 ರಂದು ನಿಗದಿಯಾಗಿದ್ದ ಸಭೆಯನ್ನು ಒಂದು ದಿನ ಮುಂದೂಡಿಕೆ ಮಾಡಲಾಗಿದೆ ಎಂದು ಹೇಳಿದರು.

ಪ್ರಧಾನಿಯನ್ನು ಬಹಿರಂಗ ಚರ್ಚೆಗೆ ಆಹ್ವಾನಿಸುವುದು ಉದ್ಧಟತನ : ಹೆಚ್‌ಡಿಕೆ

ಸಮಿತಿಯಲ್ಲಿ ಈ ಹಿಂದೆ ಸದಸ್ಯರಾಗಿದ್ದವರೇ ಮುಂದುವರೆಯಲಿದ್ದಾರೆ. ಹೆಚ್ಚುವರಿಯಾಗಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿಯವರನ್ನು ವಿಶೇಷ ಆಹ್ವಾನಿತರನ್ನಾಗಿ ಸೇರ್ಪಡೆ ಮಾಡಲಾಗಿದೆ. ಉಳಿದಂತೆ ಎಲ್ಲಾ ಸದಸ್ಯರೂ ಮೊದಲಿನಂತೆಯೇ ಇರಲಿದ್ದಾರೆ ಎಂದರು. ಸಮಿತಿಯ ಸಭೆಯಲ್ಲಿ ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಚರ್ಚೆ ನಡೆಸಿ ಕೇಂದ್ರ ಚುನಾವಣಾ ಸಮಿತಿಗೆ ಶಿಫಾರಸ್ಸು ಮಾಡಲಾಗುವುದು. ಬಹುತೇಕ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಬಗ್ಗೆಯೂ ಚರ್ಚೆಯಾಗಲಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷವನ್ನು ಬಿಜೆಪಿಯವರು ಹಿಂದೂ ವಿರೋ ಎಂದು ಅಪಪ್ರಚಾರ ಮಾಡುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ನಾವೆಲ್ಲಾ ಹಿಂದೂಗಳು. ಧರ್ಮದಲ್ಲಿ ರಾಜಕೀಯ ಬೆರೆಸುವುದು ಒಳ್ಳೆಯದಲ್ಲ. ನಮಗೆ ಎಲ್ಲಾ ಸಮುದಾಯ ಮತ್ತು ಆಚರಣೆಯ ಮೇಲೆ ನಂಬಿಕೆ ಇದೆ. ಸಿದ್ದರಾಮಯ್ಯನವರ ಹೆಸರಿನಲ್ಲಿ ರಾಮ ಇದ್ದರೆ, ನನ್ನ ಹೆಸರಿನಲ್ಲಿ ಶಿವ ಇದೆ. ಬಿಜೆಪಿಯವರ ಅಪಪ್ರಚಾರಗಳು ಲೋಕಸಭೆ ಚುನಾವಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು.

ಸಂಸದೆ ಸುಮಲತಾ ಅವರು ಕಾಂಗ್ರೆಸ್ನಿಂದ ಸ್ರ್ಪಸುತ್ತಾರೆ ಎಂಬ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

RELATED ARTICLES

Latest News