ಇಟಾನಗರ, ಡಿ 27 (ಪಿಟಿಐ) ಅರುಣಾಚಲ ಪ್ರದೇಶ ಲೋಕಸೇವಾ ಆಯೋಗ ನಡೆಸಿದ ಸಹಾಯಕ ಇಂಜಿನಿಯರ್ (ಸಿವಿಲ್) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಇಂದು ಕರೆ ನೀಡಲಾಗಿದ್ದ ಅರುಣಾಚಲ ಪ್ರದೇಶ ಬಂದ್ ನಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ರಾಜ್ಯ ಸರ್ಕಾರದ ವೈಫಲ್ಯವನ್ನು ವಿರೋಧಿಸಿ ಆಲ್ ನಿಶಿ ಸ್ಟೂಡೆಂಟ್ಸ ಯೂನಿಯನ್ ವಿದ್ಯಾರ್ಥಿ ಒಕ್ಕೂಟವು ಇಂದು ಮುಂಜಾನೆಯಿಂದ ಸಂಜೆವರೆಗೆ ಬಂದ್ಗೆ ಕರೆ ನೀಡಿದ್ದರಿಂದ ಎಲ್ಲಾ ಅಂಗಡಿಗಳು ಮತ್ತು ವ್ಯಾಪಾರ ಸಂಸ್ಥೆಗಳು, ಬ್ಯಾಂಕ್ಗಳು ಮತ್ತು ಶಿಕ್ಷಣ ಸಂಸ್ಥೆಗಳು ಮುಚ್ಚಲ್ಪಟ್ಟಿದ್ದವು ಮತ್ತು ಖಾಸಗಿ ಮತ್ತು ಸಾರ್ವಜನಿಕ ಸಾರಿಗೆಯು ರಸ್ತೆಗೆ ಇಳಿಯಲಿಲ್ಲ ಬಂದ್ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಬೃಹತ್ ಭದ್ರತಾ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಡೆಪ್ಯುಟಿ ಕಮಿಷನರ್ ತಾಲೋ ಪೊಟೊಮ್ ಹೇಳಿದ್ದಾರೆ.
ಮಗಳ ಅಶ್ಲೀಲ ವಿಡಿಯೋ ಮಾಡಿದ್ದನ್ನು ಪ್ರಶ್ನಿಸಿದ ಯೋಧನನ್ನು ಕೊಂದ ಕಿರಾತಕರು
ಎಎನ್ಎಸ್ಯು ಕಳೆದ ಡಿ.3 ರಂದು ಮುಖ್ಯಮಂತ್ರಿ ಪೆಮಾ ಖಂಡು ಅವರಿಗೆ ಪ್ರಶ್ನೆಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ 13 ಅಂಶಗಳ ಬೇಡಿಕೆಯನ್ನು ಮುಂದಿಟ್ಟಿತ್ತು ಈ ಸಂಬಂಧ ಆಗಸ್ಟ್ -29 ರಂದು ಪೊಲೀಸ್ ದೂರು ದಾಖಲಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ.
ಈ ವರ್ಷ ಆ.26 ಮತ್ತು 27 ರಂದು ನಡೆದ ಪರೀಕ್ಷೆಗೆ 400 ಕ್ಕೂ ಹೆಚ್ಚು ಅಭ್ಯರ್ಥಿಗಳು ಹಾಜರಾಗಿದ್ದರು. ಪ್ರಸ್ತುತ ಪ್ರಕರಣವನ್ನು ಸಿಬಿಐ ನಡೆಸುತ್ತಿದೆ.
APPSC, paper leak, scam, Arunachal, Bandh,