Tuesday, May 28, 2024
Homeರಾಜ್ಯBPL & APL ಹೊಸ ಕಾರ್ಡ್‍ಗಳಿಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದವರಿಗೆ ಗುಡ್ ನ್ಯೂಸ್

BPL & APL ಹೊಸ ಕಾರ್ಡ್‍ಗಳಿಗೆ ಅರ್ಜಿ ಸಲ್ಲಿಸಲು ಕಾಯುತ್ತಿದ್ದವರಿಗೆ ಗುಡ್ ನ್ಯೂಸ್

ಬೆಂಗಳೂರು,ಫೆ.15- ಪಡಿತರ ಚೀಟಿಗಳಿಗಾಗಿ ಬಾಕಿ ಇರುವ ಅರ್ಜಿಗಳನ್ನು ಮಾರ್ಚ್ 31 ರೊಳಗಾಗಿ ಇತ್ಯರ್ಥಗೊಳಿಸಿ ಏಪ್ರಿಲ್ 1 ರಿಂದ ಬಿಪಿಎಲ್, ಎಪಿಎಲ್ ಕಾರ್ಡ್‍ಗಳಿಗೆ ಹೊಸದಾಗಿ ಅರ್ಜಿಗಳನ್ನು ಸ್ವೀಕರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಮೂಡಿಗೆರೆ ಕ್ಷೇತ್ರದ ಶಾಸಕಿ ನಯನಾ ಮೋಟಮ್ಮ ಅವರ ಪ್ರಸ್ತಾವ ವ್ಯಾಪಕ ಚರ್ಚೆಗೆ ಗ್ರಾಸವಾಯಿತು.

ರಾಜ್ಯದಲ್ಲಿ ಆದ್ಯತಾ ಪಡಿತರ ಚೀಟಿಗಳನ್ನು (ಬಿಪಿಎಲ್) ಪಡೆಯಲು ಸಾಕಷ್ಟು ನಿಯಮಗಳನ್ನು ರೂಪಿಸಲಾಗಿದೆ. ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಎಲ್ಲಾ ಖಾಯಂ ನೌಕರರು ಜಿಎಸ್‍ಟಿ, ಆದಾಯ ಸೇವಾ ತೆರಿಗೆ, ವೃತ್ತಿ ತೆರಿಗೆ ಪಾವತಿಸುವವರು, ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ ನಗರಪ್ರದೇಶಗಳಲ್ಲಿ ಸಾವಿರ ಚದರ ಅಡಿಗಿಂತ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತಕ್ಕಾಗಿ ಹೊಂದಿರುವ ಕುಟುಂಬಗಳು ಜೀವನೋಪಾಯಕ್ಕಾಗಿ ಸ್ವಂತ ಓಡಿಸುವ ಒಂದು ವಾಣಿಜ್ಯ ವಾಹನ ಅಂದರೆ, ಟ್ರ್ಯಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕಿ ಇತ್ಯಾದಿಗಳನ್ನು ಹೊಂದಿರುವ ಕುಟುಂಬಗಳನ್ನು ಹೊರತುಪಡಿಸಿ 4 ಚಕ್ರದ ವಾಹನವನ್ನು ಹೊಂದಿರುವ ಎಲ್ಲಾ ಕುಟುಂಬಗಳನ್ನೂ ಬಿಪಿಎಲ್ ವ್ಯಾಪ್ತಿಯಿಂದ ಹೊರಗಿಡಲಾಗಿದೆ.

ಕುಟುಂಬದ ಆದಾಯ 1.20 ಲಕ್ಷ ರೂ.ಗಿಂತ ಹೆಚ್ಚಿದ್ದರೆ ಅವರಿಗೂ ಬಿಪಿಎಲ್‍ಗೆ ಅವಕಾಶವಿಲ್ಲ ಎಂದರು.ಈ ಹಿಂದಿನ ಸರ್ಕಾರದ ಅವಧಿಯಲ್ಲಿ 2.95 ಲಕ್ಷ ಅರ್ಜಿಗಳನ್ನು ಎಪಿಎಲ್ ಹಾಗೂ ಬಿಪಿಎಲ್‍ಗಾಗಿ ಸ್ವೀಕರಿಸಲಾಗಿತ್ತು. ಚುನಾವಣಾ ಕಾರಣಕ್ಕೆ ಹೊಸಕಾರ್ಡ್ ನೀಡುವುದನ್ನು ಸ್ಥಗಿತಗೊಳಿಸಿದ್ದರಿಂದ ಅರ್ಜಿಗಳು ಬಾಕಿ ಉಳಿದಿದ್ದವು. ಈವರೆಗೂ ಅವುಗಳ ಪೈಕಿ 57 ಸಾವಿರ ಅರ್ಜಿಗಳಿಗೆ ಕಾರ್ಡ್ ನೀಡಲಾಗಿದೆ. ಬಾಕಿ ಇರುವ ಅರ್ಜಿಗಳನ್ನು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಜಂಟಿ ಆಯುಕ್ತರು ಮತ್ತು ಉಪನಿರ್ದೇಶಕರು ಸ್ಥಳ ಪರಿಶೀಲನೆ ನಡೆಸಿ ಮಾರ್ಚ್ 31ರೊಳಗೆ ಇತ್ಯರ್ಥಪಡಿಸಲು ಗಡುವು ನೀಡಲಾಗಿದೆ.

ರೈತ ಮುಖಂಡರೊಂದಿಗೆ ಮತ್ತೊಂದು ಮಾತುಕತೆಗೆ ಮುಂದಾದ ಕೇಂದ್ರ

ಬಳಿಕ ಹೊಸ ಕಾರ್ಡ್‍ಗಳಿಗೆ ಎಲ್ಲಾ ಶಾಸಕರ ಬೇಡಿಕೆಯಂತೆ ಏಪ್ರಿಲ್ 1 ರಿಂದಲೇ ಅರ್ಜಿ ಸ್ವೀಕರಿಸಲಾಗುವುದು. ಸ್ವೀಕೃತಗೊಂಡ ಅರ್ಜಿಗಳನ್ನು 1 ತಿಂಗಳೊಳಗಾಗಿ ಇತ್ಯರ್ಥಪಡಿಸಲಾಗುವುದು ಎಂದು ಭರವಸೆ ನೀಡಿದರು. ವೈದ್ಯಕೀಯ ಅಗತ್ಯಕ್ಕನುಗುಣವಾಗಿ ಸ್ವೀಕರಿಸಲಾದ 744 ಅರ್ಜಿಗಳಿಗೂ ಪಡಿತರ ಚೀಟಿಗಳನ್ನು ನೀಡಲಾಗಿದೆ. ಇಂತಹ ಅರ್ಜಿಗಳನ್ನು ವಾರದೊಳಗಾಗಿ ಇತ್ಯರ್ಥಪಡಿಸಲು ಸೂಚಿಸಲಾಗಿದೆ ಎಂದು ಹೇಳಿದರು.

ಅನ್ನಭಾಗ್ಯ ಯೋಜನೆಯಡಿ ನಗದು ಜಮಾವಣೆಗೊಳ್ಳುತ್ತಿದ್ದು, ಶೇ.95 ರಷ್ಟು ಜನರಿಗೆ ಸೌಲಭ್ಯ ಸಿಕ್ಕಿದೆ. ತಾಂತ್ರಿಕ ಕಾರಣದಿಂದ ಶೇ.5 ರಷ್ಟು ಮಾತ್ರ ವ್ಯತ್ಯಾಸವಾಗಿದೆ. ಈ ಹಿಂದೆ ಮೂಡಿಗೆರೆ ಕ್ಷೇತ್ರದಲ್ಲಿ 599 ಜನ 4 ಚಕ್ರದ ವಾಹನ ಹೊಂದಿದ್ದಾರೆ ಎಂಬ ಕಾರಣಕ್ಕೆ ಬಿಪಿಎಲ್‍ನಿಂದ ಕೈಬಿಡಲಾಗಿತ್ತು. ಅವರಿಗೆ ಮತ್ತೆ ಬಡತನ ರೇಖೆಯ ಒಳಗಿನ ಕಾರ್ಡ್ ನೀಡಲು ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದರು.

ರೈತ ಮುಖಂಡರೊಂದಿಗೆ ಮತ್ತೊಂದು ಮಾತುಕತೆಗೆ ಮುಂದಾದ ಕೇಂದ್ರ

ಈ ಸಂದರ್ಭದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯಸರ್ಕಾರ ರಾಜ್ಯಪಾಲರ ಭಾಷಣದಲ್ಲಿ 1.20 ಕೋಟಿ ಕುಟುಂಬಗಳು ಬಿಪಿಎಲ್‍ನಿಂದ ಹೊರಗೆ ಬಂದಿದ್ದಾರೆ ಎಂದು ತಿಳಿಸಲಾಗಿದೆ. ಅದರ ಹೊರತಾಗಿಯೂ ನಾವಿಲ್ಲಿ ಬಿಪಿಎಲ್ ಕಾರ್ಡ್‍ಗಳ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ಅದರ ಅರ್ಥ ಪಂಚಖಾತ್ರಿ ಯೋಜನೆಗಳು ವೈಫಲ್ಯವಾಗಿವೆ ಎಂದಲ್ಲವೇ ಎಂದು ಪ್ರಶ್ನಿಸಿದರು. ವಿರೋಧಪಕ್ಷದ ನಾಯಕ ಆರ್.ಅಶೋಕ್, ಅರಗ ಜ್ಞಾನೇಂದ್ರ, ಕೆ.ಎಸ್.ಬಸಂತಪ್ಪ ಸೇರಿದಂತೆ ಹಲವು ಶಾಸಕರು ಚರ್ಚೆಯಲ್ಲಿ ಭಾಗವಹಿಸಿ ಸಲಹೆ ನೀಡಿದರು.

RELATED ARTICLES

Latest News