ಬೆಂಗಳೂರು,ಸೆ.27- ಇಂದು ಬೆಳಗ್ಗಿನಿಂದ ರಾಜ್ಯದ ಹಲವು ಕಡೆ ಪೊಲೀಸರು ಪಿಎಫ್‍ಐ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಇತ್ತೀಚೆಗೆ ಎನ್‍ಐಎ ಸಿಬ್ಬಂದಿಗಳು ಮತ್ತು ಪೊಲೀಸರು ಕೆಲವರ ನಿವಾಸಗಳ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಈ ಸಂಘಟನೆಗೆ ಸೇರಿದ ಕೆಲವು ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟಿಸಿ ಉದ್ವಿಗ್ನ ವಾತಾವರಣ ನಿರ್ಮಿಸಿದ್ದರು.
ಈ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸರು ಅವರನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಿದ್ದಾರೆ.
ಶಾಂತಿಗೆ ಭಂಗ ಉಂಟು ಮಾಡಬಾರದು ಎಂಬ ಉದ್ದೇಶದಿಂದ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯಾದ್ಯಂತ ಹಲವರನ್ನು ವಶಕ್ಕೆ ಪಡೆದಿದ್ದಾರೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.