“ಚಂದ್ರಶೇಖರ್ ಸಾವಿನ ಪ್ರಕರಣವನ್ನು ಸಿಐಡಿಗೆ ವಹಿಸುವ ಪ್ರಸ್ತಾವನೆ ಇಲ್ಲ”

Social Share

ಹಂಪಿ,ನ.4- ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರ ಸಹೋದರನ ಮಗನ ಸಾವಿನ ಪ್ರಕರಣವನ್ನು ಸಿಐಡಿಗೆ ವಹಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪೊಲೀಸರೇ ಇದನ್ನು ಸಮರ್ಥವಾಗಿ ತನಿಖೆ ನಡೆಸುತ್ತಾರೆ. ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ಈಗಾಗಲೇ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹೀಗಾಗಿ ಸಿಐಡಿಗೆ ವಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಎಲ್ಲ ಆಯಾಮಗಳಲ್ಲೂ ತನಿಖೆಯನ್ನು ಪೊಲೀಸರು ಕೈಗೊಂಡಿದ್ದಾರೆ. ರೇಣುಕಾಚಾರ್ಯ ಮತ್ತು ಅವರ ಕುಟುಂಬದ ಸದಸ್ಯರು ನೀಡಿರುವ ಮಾಹಿತಿ ಹಾಗೂ ಸಹೋದರ ಕೊಟ್ಟಿರುವ ದೂರನ್ನು ಆಧರಿಸಿ ತನಿಖೆ ನಡೆಯಲಿದೆ. ಸತ್ಯಾಂಶ ಶೀಘ್ರದಲ್ಲೇ ಹೊರಬರಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.

ಕೊಲೆಯ ಬಗ್ಗೆ ರೇಣುಕಾಚಾರ್ಯ ಮತ್ತು ಅವರ ಸಹೋದರರು ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. ಇದು ಕೊಲೆಯೋ, ಅಪಘಾತವೋ ಎಂಬುದು ತನಿಖೆಯಿಂದ ಮಾತ್ರ ಗೊತ್ತಾಗಲಿದೆ. ಇಂತಹ ಸಂದರ್ಭದಲ್ಲಿ ಊಹಾಪೋಹಗಳಿಗೆ ಉತ್ತರ ಕೊಡುವುದು ಸಮಂಜಸವಲ್ಲ ಎಂದು ಅವರು ತಿಳಿಸಿದರು.

BIG NEWS : ಚಂದ್ರಶೇಖರ್ ಸಾವಿನ ಹಿಂದೆ ಸಂಘಟನೆಯೊಂದರ ವ್ಯವಸ್ಥಿತ ಸಂಚು..!?

ಎಂ.ಪಿ.ರೇಣುಕಾಚಾರ್ಯ ಅವರ ಸಹೋದರ ಎಂ.ಪಿ.ರಮೇಶ್ ಅವರ ಪುತ್ರ ಚಂದ್ರಶೇಖರ್ ಅವರ ಮೃತದೇಹ ನಿನ್ನೆ ಹೊನ್ನಾಳಿ ತಾಲ್ಲೂಕಿನ ಎಚ್.ಕಡದಕಟ್ಟೆ ಬಳಿಯ ತುಂಗಾ ಕಾಲುವೆಯಲ್ಲಿ ಬಿದ್ದಿದ್ದ ಕಾರಿನಲ್ಲಿ ಮೃತದೇಹ ಪತ್ತೆಯಾಗಿತ್ತು.

Articles You Might Like

Share This Article