Saturday, July 19, 2025
Homeರಾಜ್ಯ"ಸಿದ್ದರಾಮಯ್ಯನವರೇ, ನೀವು ಕಾಂಗ್ರೆಸ್ ಗೆದ್ದ ಕ್ಷೇತ್ರಗಳಿಗೆ ಮಾತ್ರ ನೀವು ಮುಖ್ಯಮಂತ್ರಿನಾ?"

“ಸಿದ್ದರಾಮಯ್ಯನವರೇ, ನೀವು ಕಾಂಗ್ರೆಸ್ ಗೆದ್ದ ಕ್ಷೇತ್ರಗಳಿಗೆ ಮಾತ್ರ ನೀವು ಮುಖ್ಯಮಂತ್ರಿನಾ?”

"are you the CM only for the Congres won constituencies ..? : R Ashok

ಬೆಂಗಳೂರು, ಜು.19– ಆಡಳಿತರೂಢ ಕಾಂಗ್ರೆಸ್ ಪಕ್ಷದ ಶಾಸಕರ ಕ್ಷೇತ್ರಗಳಿಗೆ 50 ಕೋಟಿ ರೂ. ಬಿಡುಗಡೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ
ಧೋರಣೆಗೆ ಆಕ್ರೋಶ ವ್ಯಕ್ತಪಡಿಸಿರುವ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಆಶೋಕ್, ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿರುವವರು ಮಾತ್ರ ಕರ್ನಾಟಕದ
ಪ್ರಜೆಗಳಾ? ಕಾಂಗ್ರೆಸ್ ಶಾಸಕರನ್ನು ಗೆಲ್ಲಿಸಿರುವ ಕ್ಷೇತ್ರಗಳಿಗೆ ಮಾತ್ರ ತಾವು ಮುಖ್ಯಮಂತ್ರಿನಾ? ಕನ್ನಡಿಗರಿಗೆ ದ್ರೋಹ ಬಗೆಯುತ್ತಿರುವ ಲಜ್ಜೆಗೆಟ್ಟ ಕಾಂಗ್ರೆಸ್ ಪಕ್ಷಕ್ಕೆ
ನಾಚಿಕೆಯಾಗಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸರ್ಕಾರದ ವಿರುದ್ಧ ಸಾಲು ಸಾಲು ಪೋಸ್ಟ್ ಮಾಡಿರುವ ಅವರು, ಸೂಪರ್ ಸಿಎಂ ರಣಜಿತ್ ಸಿಂಗ್ ಸುರ್ಜೇವಾಲ ಅವರು ಶಾಸಕರೊಂದಿಗೆ ನಡೆಸಿದ ಸಭೆ ನಂತರ ಬಹಿರಂಗವಾಗಿರುವ ಅಸಮಾಧಾನಕ್ಕೆ ಬೆಚ್ಚಿ ಬಿದ್ದಿರುವ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಕುರ್ಚಿ ಉಳಿಸಿಕೊಳ್ಳಲು ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ರೂ. ಅನುದಾನ ನೀಡಲು ಮುಂದಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಸಿದ್ದರಾಮಯ್ಯನವರೇ, ಮಾತೆತ್ತಿದರೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ ಎಂದು ಬೊಬ್ಬೆ ಹೊಡೆಯುತ್ತೀರಲ್ಲ, ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ 50 ಕೋಟಿಯ ರೂ.ಗಳ ಬೆಣ್ಣೆ ಹಚ್ಚಿ, ವಿಪಕ್ಷ ಶಾಸಕರ ಕ್ಷೇತ್ರಗಳಿಗೆ ದೊಡ್ಡ ಸೊನ್ನೆ ಸುತ್ತಿ ಸುಣ್ಣ ಹಚ್ಚಿದ್ದೀರಲ್ಲ, ಇದು ಮಲತಾಯಿ ಧೋರಣೆ ಅಲ್ಲವೇ? ಎಂದು ಪ್ರಶ್ನೆ ಮಾಡಿದ್ದಾರೆ.

ಮತ್ತೊಂದು ಪೋಸ್ಟ್‌ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ಕ್ಷೇತ್ರದ ಅನುದಾನಕ್ಕಾಗಿ ವಿಪಕ್ಷದ ಶಾಸಕರು ತಾಳ್ಮೆಯಿಂದ ಕಾಯಬೇಕು ಎಂದರೆ ಏನು ಸ್ವಾಮಿ? ತಾವು ಈ ಮೊದಲೇ ಹೇಳಿರುವಂತೆ ಶಾಸಕರು ತಮ್ಮ ಬಳಿ ತಗ್ಗಿ-ಬಗ್ಗಿ ನಡೆಯಬೇಕು ಎನ್ನುವುದು ನಿಮ್ಮ ಮಾತಿನ ಅರ್ಥಾನಾ? ಅಥವಾ ತಾಳ್ಮೆಯಿಂದ ಇರದಿದ್ದರೆ ನಟ್ಟು-ಬೋಲ್ಟು ಟೈಟು ಮಾಡುತ್ತೇನೆ ಎನ್ನುವ ಧಮ್ಮಿನಾ? ಎಂದು ಪ್ರಶ್ನಿಸಿದ್ದಾರೆ.

ತಮಗೆ ಇಷ್ಟ ಬಂದ ಹಾಗೆ ಬರೀ ಕಾಂಗ್ರೆಸ್ ಶಾಸಕರಿಗೆ ಮಾತ್ರ ಅನುದಾನ ಕೊಡೋಕೆ ರಾಜ್ಯ ಸರ್ಕಾರದ ಖಜಾನೆ ನಿಮ್ಮ ಐಓಅವಿಚಿಡಿಟಿಚಿಣಚಿಞಚಿ ಪಕ್ಷದ ಪಾರ್ಟಿ ಫಂಡ್ ಅಲ್ಲ ಡಿ.ಕೆ.ಶಿವಕುಮಾರ್ ಅವರೇ, ಅದು ಆರೂವರೆ ಕೋಟಿ ಕನ್ನಡಿಗರ ಬೆವರಿನ ತೆರಿಗೆ ಹಣ. ಈ ಮಲತಾಯಿ ಧೋರಣೆ ನಿಲ್ಲಿಸಿ, ಎಲ್ಲಾ ಕ್ಷೇತ್ರಗಳಿಗೂ ಅನುದಾನ ಬಿಡುಗಡೆ ಮಾಡಿ ಎಂದು ಒತ್ತಾಯಿಸಿದ್ದಾರೆ.

ಕಳೆದ 26 ತಿಂಗಳುಗಳಲ್ಲಿ ತಮ್ಮದೇ ಪಕ್ಷದ ಸರ್ಕಾರದಿಂದ ನಯಾ ಪೈಸೆ ಅನುದಾನ ಪಡೆಯಲಾಗದೆ ತಮ್ಮ ಕ್ಷೇತ್ರಗಳಲ್ಲಿ ತಲೆ ಎತ್ತಿಕೊಂಡು ಓಡಾಡಲಾಗದ ಪರಿಸ್ಥಿತಿ ಎದುರಿಸುತ್ತಿದ್ದ ಕಾಂಗ್ರೆಸ್ ಶಾಸಕರು, ಸೂಪರ್ ಸಿಎಂ ಸುರ್ಜೇವಾಲ ಅವರ 6 ದಿನಗಳ ಸಭೆಯ ಪರಿಣಾಮದಿಂದ, ಸಿಎಂ ಸಿದ್ದರಾಮಯ್ಯ ಅವರ ಬಳಿ ತಲಾ 50 ಕೋಟಿ ರೂ. ಅನುದಾನ ಗಿಟ್ಟಿಸಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಸೂಪರ್ ಸಿಎಂ ಸುರ್ಜೇವಾಲ ಅವರೇ, ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಅನುದಾನ ಕೊಡಿಸಿಕೊಟ್ಟ ತಮಗೆ ಅಭಿನಂದನೆಗಳು. ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಶಾಸಕರ ಕ್ಷೇತ್ರಗಳಿಗೂ ಅನುದಾನ ಕೊಡಿಸಿ ಪುಣ್ಯ ಕಟ್ಟಿಕೊಳ್ಳಿ ಸ್ವಾಮಿ. ನಿಮ್ಮ ಸೂಚನೆಯ ಫಲವಾಗಿ ನಮ್ಮ ಪಕ್ಷದ ಶಾಸಕರ ಕ್ಷೇತ್ರಗಳಿಗೂ ಅನುದಾನ ಸಿಕ್ಕರೆ ತಮಗೆ ವಿಶೇಷ ಸನ್ಮಾನ ಮಾಡಿ ಅಭಿನಂದನೆ ಸಲ್ಲಿಸುತ್ತೇವೆ. ಕೊಡಿಸುತ್ತೀರಲ್ಲ? ಎಂದು ಆಶೋಕ್ ವ್ಯಂಗ್ಯಭರಿತವಾಗಿ ಪ್ರಶ್ನೆ ಮಾಡಿದ್ದಾರೆ.

RELATED ARTICLES

Latest News