ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ಅರ್ಕಾವತಿ ರೀ ಡು ವಿಚಾರ

Social Share

ಬೆಂಗಳೂರು, ಫೆ.24- ಅರ್ಕಾವತಿ ಬಡಾವಣೆಯ ರೀಡು ವಿಚಾರಕ್ಕೆ ಸಂಬಂಧಿಸಿ ದಂತೆ ನ್ಯಾ. ಕೆಂಪಣ್ಣ ಆಯೋಗದ ವರದಿಯನ್ನು ಸದನದಲ್ಲಿ ಮಂಡಿಸಬೇಕು ಎಂದು ವಿರೋಧಪಕ್ಷದ ಉಪನಾಯಕ ಯು.ಟಿ.ಖಾದರ್ ವಿಧಾನಸಭೆಯಲ್ಲಿಂದು ಒತ್ತಾಯಿಸಿದರು.

ಪ್ರಶ್ನೋತ್ತರ ಕಲಾಪದ ನಂತರ ಎದ್ದುನಿಂತ ಖಾದರ್, ಅರ್ಕಾವತಿ ಬಡಾವಣೆಗೆ ಸಂಬಂಧಿಸಿದ ವಿಚಾರ ಕುರಿತು ಮುಖ್ಯಮಂತ್ರಿ ನಿನ್ನೆ ಸದನದಲ್ಲಿ ಪ್ರಸ್ತಾಪಿಸಿದ್ದಾರೆ. ಆಯೋಗದ ವರದಿಯನ್ನು ಸದನದಲ್ಲಿ ಮಂಡಿಸಿದರೆ ಸತ್ಯಾಸತ್ಯತೆ ಜನರಿಗೆ ತಿಳಿಯಲಿದೆ ಎಂದರು.

ವಿಧಾನಸಭೆಯಲ್ಲಿ ದೇವೇಗೌಡರನ್ನು ಕೊಂಡಾಡಿದ ಯಡಿಯೂರಪ್ಪ

ಖಾದರ್ ಅವರ ಮಾತಿಗೆ ದನಿಗೂಡಿಸಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಆಯೋಗದ ವರದಿ ಬಹಿರಂಗ ಪಡಿಸಬೇಕು ಎಂಬ ಒತ್ತಾಯ ತಮ್ಮದಾಗಿದೆ ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಕಾನೂನು ಸಚಿವ ಮಾಧುಸ್ವಾಮಿ ಅವರು, ಅಯೋಗದ ವರದಿಯನ್ನು ಸಚಿವ ಸಂಪುಟದ ಮುಂದಿಟ್ಟು ಒಪ್ಪಿಗೆ ಪಡೆದ ನಂತರ ಸದನದಲ್ಲಿ ಮಂಡಿಸಲು ಅವಕಾಶವಿರುತ್ತದೆ. ಹೀಗಾಗಿ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

#ArkavatiReDoScam, #UTKhadar,

Articles You Might Like

Share This Article