ಇಬ್ಬರು ಮನೆಗಳ್ಳರ ಬಂಧನ : 3.30 ಲಕ್ಷ ಮೌಲ್ಯದ ಚಿನ್ನಾಭರಣ ವಶ

Social Share

ಬೆಂಗಳೂರು, ಜ.25- ಮನೆಯವರ ಗಮನ ಬೇರೆಡೆ ಸೆಳೆದು ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ತಿಲಕ್‍ನಗರ ಠಾಣೆ ಪೊಲೀಸರು ಬಂಧಿಸಿ 3.30 ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಡೇವಿಡ್, ವಿಕ್ರಮ್ ಬಂಧಿತ ಆರೋಪಿಗಳು. ಇವರಿಂದ 24 ಗ್ರಾಂ ತೂಕದ ಚಿನ್ನದ ಒಡವೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಗಳು ಮನೆ ಕೆಲಸ ಮಾಡಿಕೊಟ್ಟು ನಂತರ ಮನೆಯವರಿಗೆ ಕುಡಿಯುವ ನೀರು ಕೇಳಿ ಆ ನೆಪದಲ್ಲಿ ಅವರು ಒಳಗೆ ಹೋಗುತ್ತಿದ್ದಂತೆ ಕೈಗೆಟಕುವ ಬೆಳ್ಳಿ ಮತ್ತು ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗುತ್ತಿದ್ದರು. ಮನೆಗಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಫಿರ್ಯಾದುದಾರರು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದರು.
ತನಿಖಾಕಾರಿ ಸುಮಾರು 28 ಸಿಸಿ ಟಿವಿ ಪುಟೇಜ್‍ಗಳನ್ನು ಪರಿಶೀಲನೆ ಮಾಡಿ ಆರೋಪಿಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಇಬ್ಬರನ್ನು ಬಂಧಿಸಿ ಆಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಆಗ್ನೇಯ ವಿಭಾಗದ ಉಪ ಪೊಲೀಸ್ ಆಯುಕ್ತ ಶ್ರೀನಾಥ್ ಮಹದೇವ ಜೋಷಿ ಮತ್ತು ಮೈಕೋ ಲೇಔಟ್ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಕರಿಬಸವನಗೌಡ ಅವರ ಮಾರ್ಗದರ್ಶನದಲ್ಲಿ ಇನ್ಸ್‍ಪೆಕ್ಟರ್ ಗಿರೀಶ್ ಅವರನ್ನೊಳಗೊಂಡ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

Articles You Might Like

Share This Article