Sunday, July 7, 2024
Homeಬೆಂಗಳೂರು13 ವರ್ಷದಿಂದ ತಲೆಮರೆಸಿಕೊಂಡಿದ್ದ ರೌಡಿ ಬಂಧನ

13 ವರ್ಷದಿಂದ ತಲೆಮರೆಸಿಕೊಂಡಿದ್ದ ರೌಡಿ ಬಂಧನ

ಬೆಂಗಳೂರು, ಜೂ.25- ಹಲವಾರು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ 13 ವರ್ಷದಿಂದ ತಲೆಮರೆಸಿಕೊಂಡಿದ್ದ ರೌಡಿ ಸಂಜೀವ್‌ನನ್ನು ಪುಟ್ಟೇನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಜೆ.ಪಿ.ನಗರ ಪೊಲೀಸ್‌‍ ಠಾಣೆಯಲ್ಲಿ ವರದಿಯಾದ ಹಲವಾರು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ರೌಡಿ ಪತ್ತೆಗೆ ಒಂದು ವಿಶೇಷ ತಂಡ ರಚಿಸಲಾಗಿತ್ತು.ಈ ತಂಡ ಕಾರ್ಯಾಚರಣೆ ಕೈಗೊಂಡು ರೌಡಿ ಬಗ್ಗೆ ಮಾಹಿತಿ ಕಲೆ ಹಾಕಿ, ಕೆ.ಆರ್‌.ಪುರಂನ ಜೈ-ಭುವನೇಶ್ವರಿ ನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ರೌಡಿಯನ್ನು ವಶಕ್ಕೆ ಪಡೆದಿದೆ.

ದಕ್ಷಿಣ ವಿಭಾಗದ ಉಪಪೊಲೀಸ್‌‍ ಆಯುಕ್ತರಾದ ಉಮೇಶ್‌ ಭರಮಪ್ಪ ಜಗಲಸರ್‌, ಸುಬ್ರಹಣ್ಯಪುರ ಉಪ ವಿಭಾಗದ ಸಹಾಯಕ ಪೊಲೀಸ್‌‍ ಆಯುಕ್ತ ಗಿರೀಶ್‌ ನೇತೃತ್ವದಲ್ಲಿ ಇನ್‌್ಸಪೆಕ್ಟರ್‌ ರವಿಕುಮಾರ್‌ ಹಾಗೂ ಸಿಬ್ಬಂದಿ ತಂಡ ರೌಡಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

RELATED ARTICLES

Latest News