Sunday, November 24, 2024
Homeಬೆಂಗಳೂರುವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಕಿತ್ತು ಪರಾರಿಯಾಗಿದ್ದ ಮೂವರ ಬಂಧನ

ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಕಿತ್ತು ಪರಾರಿಯಾಗಿದ್ದ ಮೂವರ ಬಂಧನ

ಬೆಂಗಳೂರು, ಏ.23- ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ದುಬಾರಿ ಬೆಲೆಯ ಮೊಬೈಲ್ ಸುಲಿಗೆ ಮಾಡಿ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳಿಂದ ಸುಲಿಗೆ ಮಾಡಿದ್ದ ಮೊಬೈಲ್ ಹಾಗೂ ಕೃತ್ಯಕ್ಕೆ ಬಳಿಸಿದ್ದ ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ. ಎಚ್ಆರ್ಬಿಆರ್ ಬಡಾವಣೆ 2ನೇ ಬ್ಲಾಕ್ ನಿವಾಸಿ ಅಮರ್ ಎಂಬುವರು ಮನೆ ಮುಂದೆ ಕುಳಿತಿದ್ದಾಗ ಆರೋಪಿಗಳು ಸ್ಕೂಟರ್ನಲ್ಲಿ ಬಂದು ನಾಗವಾರಕ್ಕೆ ಹೋಗುವ ರಸ್ತೆಯ ವಿಳಾಸ ಕೇಳೂವ ನೆಪದಲ್ಲಿ ಅವರ ಕೈಯಲ್ಲಿದ್ದ ಮೊಬೈಲ್ ಸುಲಿಗೆ ಮಾಡಿ ಪರಾರಿಯಾಗಿದ್ದರು.

ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ರಚಿಸಲಾಗಿದ್ದ ವಿಶೇಷ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಇನ್ಸ್ಪೆಕ್ಟರ್ ಅರುಣ್ ಸಾಲುಂಕೆ ಮತ್ತು ಅವರ ತಂಡದ ಕಾರ್ಯ ವೈಖರಿಯನ್ನು ಹಿರಿಯ ಅಧಿಕಾರಿಗಳು ಶ್ಲಾಘಿಸಿದ್ದಾರೆ.

RELATED ARTICLES

Latest News