ನೆಲಮಂಗಲ, ಸೆ.12: ಕಾರಿನಲ್ಲಿ ತೆರಳುತ್ತಿದ್ದ ವಿಜ್ಞಾನಿ ಮೇಲೆ ಕಲ್ಲು ತೂರಿ ಹಲ್ಲೆಗೆ ಯತ್ನಿಸಿದ್ದ ಕುಖ್ಯಾತ ಮೂವರು ದರೋಡೆಕೋರರನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಮೈಲಾರಿ(22), ನವೀನ್(22) ಹಾಗೂ ಶಿವರಾಜ್(30) ಬಂಧಿತ ಆರೋಪಿಗಳು.
ಸೋಮ ಅಲಿಯಾಸ್ ಸೋನು, ಕೀರ್ತಿ ಅಲಿಯಾಸ್ ಉಮೇಶ್ ಎಂಬ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು ಬಂಧನಕ್ಕೆ ಬಲೆ ಬೀಸಲಾಗಿದೆ. ಬೆಂಗಳೂರು ಉತ್ತರ ತಾಲೂಕಿನ ರಾವುತನಹಳ್ಳಿಯಲ್ಲಿ ಕಳೆದ ಆ.24ರಂದು ನ್ಯಾನೊ ಮತ್ತು ಸಾಫ್ಟ್ ಮ್ಯಾಟರ್ ಸೈನ್ಸಸ್ ಕೇಂದ್ರದ (ಸಿಇಎನ್‍ಎಸ್) 34 ವರ್ಷದ ವಿಜ್ಞಾನಿ ಅಶುತೋಷ್ ಕುಮಾರ್ ಸಿಂಗ್ ಅವರ ಕಾರಿಗೆ ದುಷ್ಕರ್ಮಿಗಳು ಕಲ್ಲೆಸೆದು ಹಲ್ಲೆಗೆ ಯತ್ನಿಸಿದ್ದರು.
ಯಶಸ್ವಿ ಜಿ-20 : ಭಾರತದ ಆರ್ಥಿಕ ಕಾರಿಡಾರನ್ನು ಕೊಂಡಾಡಿದ ಹಲವು ರಾಷ್ಟ್ರಗಳು
ಈ ಸಂಬಂಧ ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಎಸ್ಪಿ ಮಲ್ಲಿಕಾರ್ಜುನ ಬಾಲದಂಡೆ ಮಾರ್ಗದರ್ಶನದಲ್ಲಿ ತಂಡ ರಚನೆಯಾಗಿತ್ತು. ಸದ್ಯ ಈಗ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಂಗಳೂರು ಉತ್ತರ ತಾಲೂಕಿನ ರಾವುತನಹಳ್ಳಿ ಬಳಿ ಕಾರ್ಯಾಚರಣೆ ನಡೆಸಿ ಮಧ್ಯರಾತ್ರಿ ದರೋಡೆಗೆ ಹೊಂಚು ಹಾಕುತ್ತಿದ್ದಾಗ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಬಳಿಯಿದ್ದ ಮಾರಕಾಸ್ತ್ರ, ಕೃತ್ಯಕ್ಕೆ ಬಳಸಿದ್ದ ಬೈಕ್ ಜಪ್ತಿ ಮಾಡಲಾಗಿದೆ.
#threeArrested, #tried, #scientist, #peltingstones,