Sunday, November 24, 2024
Homeಬೆಂಗಳೂರುಅಮಾಯಕ ಜೀವಗಳ ಸಾವಿಗೆ ಕಾರಣರಾದ ಎಂಜಿನಿಯರ್‌ಗಳನ್ನು ಬಂಧಿಸಿ : ಎಸ್.ಹರೀಶ್

ಅಮಾಯಕ ಜೀವಗಳ ಸಾವಿಗೆ ಕಾರಣರಾದ ಎಂಜಿನಿಯರ್‌ಗಳನ್ನು ಬಂಧಿಸಿ : ಎಸ್.ಹರೀಶ್

arrest-the-engineers-responsible-for-the-death-of-innocent-lives-s-harish

ಬೆಂಗಳೂರು,ಅ.23- ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದು ಐದು ಮಂದಿ ಪ್ರಾಣ ಕಳೆದುಕೊಳ್ಳಲು ಕಾರಣಕರ್ತರಾಗಿರುವ ಎಂಜಿನಿಯರ್‌ಗಳನ್ನು ಈ ಕೂಡಲೇ ಬಂಧಿಸಿ ಜೈಲಿಗೆ ಕಳುಹಿಸಬೇಕು ಎಂದು ಬೆಂಗಳೂರು ಉತ್ತರ ಬಿಜೆಪಿ ಘಟಕದ ಅಧ್ಯಕ್ಷ ಹಾಗೂ ಮಾಜಿ ಉಪಮೇಯರ್ ಎಸ್.ಹರೀಶ್ ಆಗ್ರಹಿಸಿದ್ದಾರೆ.

ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯ ಬಾಬು ಸಾಬ್ ಪಾಳ್ಯದಲ್ಲಿ ಆರಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿದು ಬೀಳಲು ಸ್ಥಳೀಯ ಕಾರ್ಯಪಾಲಕ ಅಭಿಯಂತರ, ಸಹಾಯಕ ಕಾರ್ಯಪಾಲಕ ಅಭಿಯಂತರ ಹಾಗೂ ಸಹಾಯಕ ಅಭಿಯಂತರರೇ ಕಾರಣರಾಗಿರುವುದರಿಂದ ಅವರನ್ನು ಕೂಡಲೇ ಬಂಧಿಸಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ

ಕೇವಲ 2400 ಚದುರಡಿ ನಿವೇಶನ ದಲ್ಲಿ ಕೇವಲ ನಾಲ್ಕು ಅಂತಸ್ತಿನ ಕಟ್ಟಡ ನಿರ್ಮಿಸಲು ಮಾತ್ರ ಅನುಮತಿ ನೀಡ ಬೇಕು. ಆದರೆ, ಕಟ್ಟಡ ಕುಸಿದುಬಿದ್ದಿರುವ ನಿವೇಶನದಲ್ಲಿ ಅಕ್ರಮವಾಗಿ ಆರು ಅಂತಸ್ತಿನ ಕಟ್ಟಡ ನಿರ್ಮಿಸುತ್ತಿ ರುವುದು ಕಂಡು ಬಂದಿದೆ.
ಕೇವಲ ನಾಲ್ಕು ಅಂತಸ್ತಿನ ಕಟ್ಟಡ ನಿರ್ಮಿಸಲು ಮಾತ್ರ ಅನುಮತಿ ಪಡೆದು ಆರು ಅಂತಸ್ತಿನ ಕಟ್ಟಡವನ್ನು ಅಕ್ರಮವಾಗಿ ನಿರ್ಮಿಸುತ್ತಿದ್ದರೂ ಸಂಬಂಧಪಟ್ಟ ಎಂಜಿನಿಯರ್ಗಳು ಕಣುಚ್ಚಿ ಕುಳಿತಿರುರುವುದನ್ನು ನೋಡಿದರೆ ಅವರು ಈ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗುತ್ತಿದೆ.

ಹೀಗಾಗಿ ಸಂಬಂಧಪಟ್ಟ ಕಾರ್ಯಪಾಲಕ ಅಭಿಯಂತರ ಚೆನ್ನಬಸಪ್ಪ, ಸಹಾಯಕ ಕಾರ್ಯಪಾಲಕ ಅಭಿಯಂತರ ವಿನಯ್ ಹಾಗೂ ಸಹಾಯಕ ಅಭಿಯಂತರ ರಮೇಶ್ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಈ ಮೂವರು ಅಭಿಯಂತರರನ್ನು ಕೇವಲ ಬಂಧಿಸಿದರೆ ಸಾಲದು ಅವರನ್ನು ಜೈಲಿಗೆ ಕಳುಹಿಸಿದರೆ ಉಳಿದ ಅಭಿಯಂತರರು ಭವಿಷ್ಯದಲ್ಲಿ ಇಂತಹ ತಪ್ಪು ಮಾಡುವುದನ್ನು ತಪ್ಪಿಸಬಹುದಾಗಿದೆ ಎಂದು ಹರೀಶ್ ಸಲಹೆ ನೀಡಿದ್ದಾರೆ. ಮಾತ್ರವಲ್ಲ, ನಗರದಲ್ಲಿ ಅಕ್ರಮವಾಗಿ ನಿರ್ಮಿಸಲಾಗುತ್ತಿರುವ ಕಟ್ಟಡಗಳನ್ನು ಪತ್ತೆ ಹಚ್ಚಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

RELATED ARTICLES

Latest News