Tuesday, December 3, 2024
Homeಅಂತಾರಾಷ್ಟ್ರೀಯ | Internationalಅಮೆರಿಕದಲ್ಲಿ ಅದಾನಿ ವಿರುದ್ಧ ಅರೆಸ್ಟ್ ವಾರೆಂಟ್

ಅಮೆರಿಕದಲ್ಲಿ ಅದಾನಿ ವಿರುದ್ಧ ಅರೆಸ್ಟ್ ವಾರೆಂಟ್

Arrest Warrant issued against Gautam Adani in New York

ನ್ಯೂಯಾರ್ಕ್,ನ. 21– ಅದಾನಿ ಗ್ರೂಪ್ಗೆ ಹಿಂಡನ್ಬರ್ಗ್ ವರದಿ ಬಳಿಕ ಮತ್ತೊಂದು ಗಂಡಂತಾರ ಎದುರಾಗಿದೆ. ಗೌತಮ್ ಅದಾನಿ ಸೇರಿದಂತೆ ಎಂಟು ಮಂದಿ ವಿರುದ್ಧ ಅಮೆರಿಕದಲ್ಲಿ ವಂಚನೆಯ ಆರೋಪಗಳು ದಾಖಲಾಗಿವೆ.

ಸೌರಶಕ್ತಿ ಗುತ್ತಿಗೆಗಳನ್ನು ಪಡೆಯಲು ಭಾರತೀಯ ಅಧಿಕಾರಿಗಳಿಗೆ ಲಂಚ ನೀಡಿದ ಆರೋಪ ಪ್ರಮುಖವಾಗಿ ಕೇಳಿಬಂದಿದೆ. ಕೆನಡಾದ ಪೆನ್ಷನ್ ಫಂಡ್ ಆದ ಸಿಡಿಪಿಕ್ಯೂನ ಮಾಜಿ ಎಂಡಿ, ಹಾಗು ಅಜುರೆ ಪವರ್ ಸಂಸ್ಥೆಯ ಮಾಜಿ ಎಕ್ಸಿಕ್ಯೂಟಿವ್ ಆದ ಸೈರಿಲ್ ಕೆಬನೆಸ್ ಅವರೂ ಆರೋಪಿತರಲ್ಲಿ ಸೇರಿದ್ದಾರೆ. ಗೌತಮ್ ಅದಾನಿ, ಸೈರಿಲ್ ಕೆಬನೆಸ್ ಅವರಲ್ಲದೆ, ಸಾಗರ್ ಅದಾನಿ, ವಿನೀತ್ ಜೈನ್, ರಂಜಿತ್ ಗುಪ್ತ, ಸೌರಭ್ ಅಗರ್ವಾಲ್, ದೀಪಕ್ ಮಲ್ಹೋತ್ರಾ, ರೂಪೇಶ್ ಅಗರ್ವಾಲ್ ಅವರು ಈ ಪ್ರಕರಣದಲ್ಲಿ ಕಾಣಿಸಿಕೊಂಡಿದ್ದಾರೆ.

ಅಮೆರಿಕದ ಮಾರುಕಟ್ಟೆ ನಿಯಂತ್ರಕ ಸಂಸ್ಥೆಯಾದ ಎಸ್ಇಸಿ ನ್ಯೂಯಾರ್ಕ್ನ ಡಿಸ್ಟ್ರಿಕ್ಟ್ ಕೋರ್ಟ್ನಲ್ಲಿ ಗೌತಮ್ ಅದಾನಿ, ಸಾಗರ್ ಅದಾನಿ ಮತ್ತು ಸಿರಿಲ್ ಕೆಬನೆಸ್ ವಿರುದ್ಧ ಸಿವಿಲ್ ಚಾರ್ಜ್ ಹಾಕಿದೆ. ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ವಿರುದ್ಧ ಅರೆಸ್ಟ್ ವಾರಂಟ್ ಹೊರಡಿಸಲಾಗಿದೆ ಎಂದು ವರದಿಯಾಗಿದೆ.

ಅದಾನಿ ಗ್ರೀನ್ ಎನರ್ಜಿ ಮತ್ತು ಅಜುರೆ ಪವರ್ ಸಂಸ್ಥೆಗಳು ಭಾರತದಲ್ಲಿ ಮಾರುಕಟ್ಟೆ ಬೆಲೆಗಿಂತ ಹೆಚ್ಚಿನ ದರದಲ್ಲಿ ಸೌರಶಕ್ತಿ ಗುತ್ತಿಗೆಗಳನ್ನು ಪಡೆಯಲು ಭಾರತೀಯ ಅಧಿಕಾರಿಗಳಿಗೆ 250 ಮಿಲಿಯನ್ ಡಾಲರ್ಗೂ ಅಧಿಕ ಮೊತ್ತದಷ್ಟು ಲಂಚ ನೀಡಲಾಗಿದೆ ಎಂಬುದು ಆರೋಪ. 2020-24ರ ಅವಧಿಯಲ್ಲಿ ಲಂಚಗಳನ್ನು ನೀಡಿದ ಅಥವಾ ನೀಡಲು ಯೋಜಿಸಿದ ಘಟನೆಗಳು ನಡೆದಿವೆ ಎಂದು ಹೇಳಲಾಗಿದೆ.

ಅದಾನಿ ಗ್ರೀನ್ ಎನರ್ಜಿ ಸಂಸ್ಥೆ ಅಮೆರಿಕದ ಹೂಡಿಕೆದಾರರಿಂದ 3 ಬಿಲಿಯನ್ ಡಾಲರ್ಗೂ ಅಧಿಕ ಮೊತ್ತದಷ್ಟು ಸಾಲ ಹಾಗೂ ಬಾಂಡ್ಗಳನ್ನು ಪಡೆದಿದೆ. ಭಾರತದಲ್ಲಿ ಲಂಚ ನೀಡಿ ಗುತ್ತಿಗೆ ಪಡೆದ ವಿಚಾರವನ್ನು ಹೂಡಿಕೆದಾರರಿಂದ ಮುಚ್ಚಿಟ್ಟು ಅವರನ್ನು ವಂಚಿಸಲಾಗಿದೆ. ಹೂಡಿಕೆದಾರರ ಹಿತದಷ್ಟಿಯಿಂದ ಈ ಪ್ರಕರಣವನ್ನು ದಾಖಲಿಸಲಾಗಿದೆ ಎಂಬುದು ಪ್ರಾಸಿಕ್ಯೂಟರ್ಗಳ ವಾದವಾಗಿದೆ.

ಹಾಗೆಯೇ, ಅಜುರೆ ಪವರ್ ಅಮೆರಿಕದ ಷೇರುಮಾರುಕಟ್ಟೆಯಲ್ಲಿ ಲಿಸ್ಟ್ ಆಗಿರುವ ಕಂಪನಿಯಾಗಿತ್ತು. ಹೀಗಾಗಿ, ಅಜುರೆ ಪವರ್ರಸ ಅಂದಿನ ಎಕ್ಸಿಕ್ಯೂಟಿವ್ ಆಗಿದ್ದ ಸಿರಿಲ್ ಕೆಬನೆಸ್ ಅವರ ವಿರುದ್ಧವೂ ಅಮೆರಿಕದಲ್ಲಿ ಪ್ರಾಸಿಕ್ಯೂಶನ್ ಪ್ರಕ್ರಿಯೆ ಚಾಲುಗೊಂಡಿದೆ. ಅದ್ಯ ಅಜುರೆ ಪವರ್ ಅನ್ನು ನ್ಯೂಯಾರ್ಕ್ ಸ್ಟಾಕ್ ಎಕ್ಸ್ಚೇಂಜ್ನಿಂದ ಡೀಲಿಸ್ಟ್ ಮಾಡಲಾಗಿದೆ.
ಎಸ್ಇಸಿಯ ಎನ್ಫೋರ್ಸ್ಮೆಂಟ್ ವಿಭಾಗಕ್ಕೆ ಭಾರತ ಮೂಲದವರೇ ಆದ ಸಂಜಯ್ ವಾಧವ ಅವರೇ ಮುಖ್ಯಸ್ತರಾಗಿದ್ದಾರೆ. ವಾಧವಾ ಮಾಡಿರುವ ಆರೋಪದ ಪ್ರಕಾರ, ಅದಾನಿ ಗ್ರೀನ್ ಎನರ್ಜಿ ಸಂಸ್ಥೆ ಬಾಂಡ್ಗಳ ಮೂಲಕ ಅಮೆರಿಕನ್ ಹೂಡಿಕೆದಾರರಿಂದ ಸಾಲ ಪಡೆದಿತ್ತು. ಈ ವೇಳೆ ತನ್ನ ಸಂಸ್ಥೆಯಲ್ಲಿ ಲಂಚ ವಿರೋಧಿ ಕಾನೂನು ವ್ಯವಸ್ಥೆ ಇರುವುದಾಗಿ ಹೂಡಿಕೆದಾರರಿಗೆ ಸುಳ್ಳು ಹೇಳಿತ್ತು ಎಂದಿದ್ದಾರೆ.

ಅಮೆರಿಕ ಕೋರ್ಟ್ನಲ್ಲಿ ಗೌತಮ್ ಅದಾನಿ ಮತ್ತಿತರರ ವಿರುದ್ಧ ಆರೋಪಗಳು ದಾಖಲಾದ ಬೆನ್ನಲ್ಲೇ ಅದಾನಿ ಗ್ರೀನ್ ಎನರ್ಜಿ ಸಂಸ್ಥೆ ತನ್ನ 600 ಮಿಲಿಯನ್ ಯುಎಸ್ ಡಾಲರ್ ಬಾಂಡ್ಗಳ ವಿತರಣೆಯ ಯೋಜನೆಯನ್ನು ಕೈಬಿಟ್ಟಿದೆ. ಈ ಬಾಂಡ್ಗಳಿಗೆ ಸಾಕಷ್ಟು ಹೂಡಿಕೆದಾರರು ಅರ್ಜಿ ಹಾಕಿದ್ದರು. ಕೋರ್ಟ್ನಲ್ಲಿ ಪ್ರಕರಣ ಬರುತ್ತಲ್ಲೇ ಸಂಸ್ಥೆ ತನ್ನ ನಡೆಯನ್ನು ಹಿಂಪಡೆದುಕೊಂಡಿದೆ.

RELATED ARTICLES

Latest News