ಬೆಂಗಳೂರು, ಜ.6- ಪ್ರಯಾಣಿಕರ ಸೋಗಿನಲ್ಲಿ ಬಿಎಂಟಿಸಿ ಬಸ್ಗಳನ್ನು ಹತ್ತಿ ಪ್ರಯಾಣಿಕರ ಮೊಬೈಲ್ಗಳನ್ನು ಎಗರಿಸಿ ಹೈದ್ರಾಬಾದ್ನಲ್ಲಿ ಮಾರಾಟ ಮಾಡುತ್ತಿದ್ದ ಆಂಧ್ರ ಪ್ರದೇಶ ಗ್ಯಾಂಗ್ನ ಒಬ್ಬಾತನನ್ನು ಗೋವಿಂದರಾಜ ನಗರ ಠಾಣೆ ಪೊಲೀಸರು ಬಂಧಿಸಿ 3 ಲಕ್ಷ ಮೌಲ್ಯದ 49 ಮೊಬೈಲ್ ಪೋನ್ಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಆಂಧ್ರ ಪ್ರದೇಶದ ಕರ್ನೋಲ್ ಜಿಲ್ಲೆಯ ಅವುಲ ಕಾವಡಿ ವಿಜಯ್(27) ಬಂಧಿತ ಆರೋಪಿ. ಈತ ನಗರದಲ್ಲಿ ದೊಡ್ಡ ಆಲದ ಮರದ ವಿನಾಯಕ ನಗರದಲ್ಲಿ ವಾಸವಾಗಿದ್ದನು.
ನಗರದ ವಿವಿಧ ಕಡೆಗಳಲ್ಲಿ ಸಂಚರಿಸುವ ಬಿಎಂಟಿಸಿ ಬಸ್ಗಳಲ್ಲಿ ಪ್ರಯಾಣಿಕರ ಮೊಬೈಲ್ ಫೋನ್ಗಳು ಕಳುವಾಗುತ್ತಿರುವ ಬಗ್ಗೆ ಹೆಚ್ಚಿನ ಪ್ರಕರಣಗಳು ದಾಖಲಾಗುತ್ತಿದ್ದವು.
ಈ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಬಿಎಂಟಿಸಿ ಬಸ್ಗಳಲ್ಲಿ ಪ್ರಯಾಣಿಕರ ಸೋಗಿನಲ್ಲಿ ಹತ್ತಿ ಪ್ರಯಾಣಿಕರ ಮೊಬೈಲ್ ಫೋನ್ಗಳನ್ನು ಎಗರಿಸಿ ಪರಾರಿಯಾಗುತ್ತಿದ್ದ ಕುಖ್ಯಾತ ಕಳ್ಳರ ಗ್ಯಾಂಗ್ ಬಗ್ಗೆ ಮಾಹಿತಿ ಕಲೆ ಹಾಕಿ ಆರೋಪಿಗಳ ಜಾಡು ಹಿಡಿದು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಒಬ್ಬಾತನನ್ನು ಬಂಧಿಸಿ 3 ಲಕ್ಷ ಮೌಲ್ಯದ 49 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನಿಬ್ಬರು ತಲೆಮರೆಸಿಕೊಂಡಿದ್ದು, ಅವರ ಪತ್ತೆ ಕಾರ್ಯ ಮುಂದುವರೆದಿದೆ.
Arrested, robbing, mobile, phones,