ಚುನಾವಣಾ ಆಯುಕ್ತರಾಗಿ ಗೋಯಲ್ ನೇಮಕ

Social Share

ನವದೆಹಲಿ,ನ.21- ನಿವೃತ್ತ ಐಎಎಸ್ ಅಧಿಕಾರಿ ಅರುಣ್ ಗೋಯೆಲ್ ಅವರು ಇಂದು ಚುನಾವಣಾ ಆಯುಕ್ತರಾಗಿ ಹೊಸ ಜವಾಬ್ದಾರಿ ವಹಿಸಿಕೊಂಡಿದ್ದಾರೆ. 1985ರ ಬ್ಯಾಚ್‍ನ ಐಎಎಸ್ ಅಧಿಕಾರಿಯಾಗಿದ್ದ ಗೋಯಲ್ ಅವರು ಮೊನ್ನೆಯಷ್ಟೆ ಸ್ವಯಂ ನಿವೃತ್ತಿ ಹೊಂದಿದ್ದರು. ಅವರ ನಿವೃತ್ತಿ ಬೆನ್ನಲ್ಲೆ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸುವ ಆದೇಶ ಹೊರಡಿಸಲಾಗಿತ್ತು.

ಇಂದು ಬೆಳಿಗ್ಗೆ ಕಚೇರಿಗೆ ಆಗಮಿಸಿದ ಗೋಯಲ್ ಅವರು ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ ಎಂದು ಚುನಾವಣಾ ಸಮಿತಿ ತಿಳಿಸಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತ ಅನುಪ್ ಚಂದ್ರ ಪಾಂಡೆ ಅವರೊಂದಿಗೆ ಹೊಸ ಆಯುಕ್ತರಾಗಿ ಸೇವೆ ಸಲ್ಲಿಸಲಿದ್ದಾರೆ.

ಮೆರವಣಿಗೆ ಹೋಗುತ್ತಿದ್ದ ಜನರ ಮೇಲೆ ಟ್ರಕ್ ಹರಿದು 12 ಮಂದಿ ಸಾವು

ಮುಖ್ಯ ಚುನಾವಣಾ ಆಯುಕ್ತರಾಗಿದ್ದ ಸುಶೀಲ್ ಚಂದ್ರ ಅವರ ನಿವೃತ್ತಿಯಿಂದ ತೆರವಾಗಿದ್ದ ಆಯುಕ್ತರ ಹುದ್ದೆಗೆ ಗೋಯಲ್ ಅವರನ್ನು ನೇಮಿಸಲಾಗಿದೆ. ಗುಜರಾತ್ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಗೋಯಲ್ ಅವರನ್ನು ನೇಮಕ ಮಾಡಲಾಗಿದೆ.

ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಆಮೀಷವೊಡ್ಡಿದ 6 ಮಂದಿ ವಿರುದ್ದ FIR

ಇದರಿಂದ ಮುಂಬರುವ ದಿನಗಳಲ್ಲಿ ನಡೆಯಲಿರುವ ನಾಗಾಲ್ಯಾಂಡ್, ಮೇಘಾಲಯ, ತ್ರಿಪುರಾ ಮತ್ತು ಕರ್ನಾಟಕ ದ ಚುನಾವಣೆಗಳಿಗೆ ಸಹಕಾರಿಯಾಗಲಿದೆ.

Arun Goel, appointed, new, Election, Commissioner,

Articles You Might Like

Share This Article