ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‍ಸಿಂಗ್ ಇಂದು ಬೆಂಗಳೂರಿಗೆ ಆಗಮನ

Social Share

ಬೆಂಗಳೂರು,ಅ.14- ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್‍ಸಿಂಗ್ ಅವರು ಇಂದು ರಾತ್ರಿ 8.10ಕ್ಕೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

 ಕುಮಾರಕೃಪಾ ಗೆಸ್ಟ್‍ಹೌಸ್‍ನಲ್ಲಿ ವಾಸ್ತವ್ಯ ಹೂಡುವ ಅವರು,  ಪೂರ್ವ ನಿಗದಿತ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು. 15ರಂದು ಹಾವೇರಿ, ಹಿರೇಕೆರೂರುಗಳಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ ಹುಬ್ಬಳ್ಳಿಯಲ್ಲಿ ತಂಗುವ ಅವರು 16ರಂದು  ಹುಬ್ಬಳ್ಳಿ- ಧಾರವಾಡಗಳಿಗೆ ಸಂಬಂಸಿದ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ. 

ಬಳಿಕ ಬೆಳಗಾವಿಗೆ ತೆರಳಿ ಕೆಲವು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಹಾಗೂ ಬೆಳಗಾವಿ ಕೆಎಲ್‍ಇ ಗೆಸ್ಟ್ ಹೌಸ್‍ನಲ್ಲಿ ವಾಸ್ತವ್ಯ ಇರುವರು.
17ರಂದು ಅವರು ಚಿಕ್ಕೋಡಿಯಲ್ಲಿ ಪೂರ್ವ ನಿಗದಿತ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಮಧ್ಯಾಹ್ನ ಬೆಳಗಾವಿ ವಿಮಾನ ನಿಲ್ದಾಣದಿಂದ ದೆಹಲಿಗೆ ಹಿಂತಿರುಗಲಿದ್ದಾರೆ.

Articles You Might Like

Share This Article