ಕೋವಿಡ್‍ನಿಂದ ಕೇಜ್ರಿವಾಲ್ ಗುಣಮುಖ

Social Share

ನವದೆಹಲಿ,ಜ.9- ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತಾವು ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದು ಸಾರ್ವಜನಿಕ ಸೇವೆಗೆ ಹಿಂತಿರುಗಿರುವುದಾಗಿ ಇಂದು ಹೇಳಿದ್ದಾರೆ. ಕೇಜ್ರಿವಾಲ್ ಅವರಿಗೆ ಜ.4ರಂದು ಕೋವಿಡ್ ಪಾಸಿಟಿವ್ ವರದಿ ಬಂದಿದ್ದು, ಮನೆಯಲ್ಲೇ ಪ್ರತ್ಯೇಕ ವಾಸವಿದ್ದರು. ಅವರಿಗೆ ಲಘು ಲಕ್ಷಣಗಿದ್ದವು.
ಜ.3ರಂದು ಡೆಹ್ರಾಡೂನ್‍ನಲ್ಲಿ ರ್ಯಾಲಿಯೊಂದನ್ನು ನಡೆಸಿದ ಬಳಿಕ ಕೇಜ್ರಿವಾಲ್ ಅವರಿಗೆ ಕೋವಿಡ್ ಪಾಸಿಟಿವ್ ಬಂದಿತ್ತು. ಕಳೆದ ವರ್ಷ ಏಪ್ರಿಲ್ ಕೇಜ್ರಿವಾಲ್ ಅವರ ಪತ್ನಿ ಸುನಿತಾ ಅವರಿಗೆ ಕೋವಿಡ್ ಪಾಸಿಟಿವ್ ಆಗಿತ್ತು. ಕೇಜ್ರಿವಾಲ್ ಅವರಿಗೆ ಕಾಯಿಲೆಯ ಲಕ್ಷಣಗಳು ಕಾಣಿಸಿಕೊಂಡಿದ್ದರೂ ಅವರ ಕೋವಿಡ್ ಪರೀಕ್ಷಾ ವರದಿ ನೆಗೆಟಿವ್ ಬಂದಿತ್ತು.
ಕಳೆದ ವರ್ಷ, ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಸಾರಿಗೆ ಸಚಿವ ಕೈಲಾಶ್ ಗೆಹ್ಲೋಟ್ ಮತ್ತು ಪರಿಸರ ಸಚಿವ ಗೋಪಾಲ್ ರಾಯ್ ಸೇರಿದಂತೆ ಕೇಜ್ರಿವಾಲ್ ಸಂಪುಟದ ಬಹುತೇಕ ಸಚಿವರಿಗೆ ಕೋವಿಡ್ ಸೋಂಕು ದೃಢಪಟ್ಟಿತ್ತು.

Articles You Might Like

Share This Article