ಕೇಜ್ರಿವಾಲ್ ಹತ್ಯೆಗೆ ಸಂಚು ಆರೋಪ, ತನಿಖೆಗೆ ಬಿಜೆಪಿ ಆಗ್ರಹ

Social Share

ನವದೆಹಲಿ,ನ.25- ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಹತ್ಯೆಗೆ ಸಂಚು ನಡೆದಿದೆ ಎಂಬ ಆರೋಪ ಕುರಿತು ತನಿಖೆ ನಡೆಯಬೇಕಿದೆ ಎಂದು ಬಿಜೆಪಿ ಆಗ್ರಹಿಸಿದೆ. ಈ ಬಗ್ಗೆ ಬಿಜೆಪಿಯ ಸಂಸದ ಮನೋಜ್ ತಿವಾರಿ ತಿರುಗೇಟು ನೀಡಿದ್ದು, ಮುಖ್ಯಮಂತ್ರಿಯವರ ಭದ್ರತೆ ಕುರಿತಂತೆ ತಾವು ಆತಂಕಕ್ಕೆ ಒಳಗಾಗಿರುವುದಾಗಿ ವ್ಯಂಗ್ಯವಾಡಿದ್ದಾರೆ.

ಇತ್ತೀಚಿನ ಭ್ರಷ್ಟಾಚಾರ ಪ್ರಕರಣಗಳು ಮತ್ತು ಪಾಲಿಕೆ ಚುನಾವಣೆ ಟಿಕೆಟ್ ಮಾರಾಟದಿಂದ ಆಮ್‍ಆದ್ಮಿ ಪಕ್ಷದ ಕಾರ್ಯಕರ್ತರು ಸಿಟ್ಟಾಗಿದ್ದಾರೆ. ಕೆಲವು ಹತ್ಯಾಚಾರ ಪ್ರಕರಣ, ಜೈಲಿನಲ್ಲಿ ಮಸಾಜ್ ಪ್ರಕರಣ ಸೇರಿದಂತೆ ಹಲವು ಸಮಸ್ಯೆಗಳನ್ನು ಪತ್ತೆಹಚ್ಚುತ್ತಿದೆ. ಕಾರ್ಯಕರ್ತರೇ ಪಕ್ಷದ ಶಾಸಕರನ್ನು ಥಳಿಸಿದ್ದಾರೆ. ಇದು ಮುಖ್ಯಮಂತ್ರಿಯವರ ಜತೆ ನಡೆಯಬಾರದು ಎಂದು ತಿವಾರಿ ಟ್ವೀಟ್ ಮಾಡಿದ್ದಾರೆ.

ಮುಖ್ಯಮಂತ್ರಿಯವರ ಭದ್ರತೆ ಕುರಿತಂತೆ ಉಪ ಮುಖ್ಯಮಂತ್ರಿ ಮನೀಸ್ ಶಿಸೋಡಿಯ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಲೆಫ್ಟಿನೆಂಟ್ ಗೌರ್ನರ್ ವಿ.ಕೆ.ಸಕ್ಸ್‍ಸೇನ ತನಿಖೆಗೆ ಆದೇಶಿಸಿದ್ದಾರೆ ಎನ್ನಲಾಗಿದೆ.

ಅಮಾನತುಗೊಂಡ ಟ್ವಿಟರ್ ಖಾತೆಗಳು ಮರು ಸ್ಥಾಪನೆಯಾಗಲಿವೆ

ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮನೀಸ್ ಶಿಸೋಡಿಯ, ಬಿಜೆಪಿ ನಾಯಕರ ಹೇಳಿಕೆಗಳು ಬೆದರಿಕೆ ಮಾದರಿಯಲ್ಲಿವೆ ಎಂದು ಆರೋಪಿಸಿದ್ದು, ಈ ಕುರಿತು ಪ್ರಕರಣ ದಾಖಲಿಸಬೇಕು. ಮನೋಜ್ ತಿವಾರಿಯವರನ್ನು ಬಂಧಿಸಬೇಕೆಂದು ಒತ್ತಾಯಿಸಿದ್ದರು.

ಆಯ್ಕೆ ಮಾಡಿದ ಅಭ್ಯರ್ಥಿಯನ್ನು ಒಪ್ಪಿಕೊಂಡು ಒಟ್ಟಾಗಿ ಕೆಲಸ ಮಾಡಿ : ಡಿಕೆಶಿ

ಚುನಾವಣಾ ಆಯೋಗಕ್ಕೂ ದೂರು ನೀಡಿ ಗುಜರಾತ್ ವಿಧಾನಸಭೆ, ದೆಹಲಿಯ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಕೇಜ್ರಿ ಅವರನ್ನು ಬೆದರಿಸಿ ಪ್ರಚಾರದಿಂದ ದೂರ ಸರಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ವಿವರಿಸಿದ್ದಾರೆ.

Arvind Kejriwal, kill, Manoj Tiwar, BJP, demands, investigation,

Articles You Might Like

Share This Article