Thursday, September 19, 2024
Homeರಾಷ್ಟ್ರೀಯ | Nationalಹೈಕೋರ್ಟ್‌ ಎತ್ತಿಹಿಡಿದಿದ್ದ ಬಂಧನ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಕೇಜ್ರಿ

ಹೈಕೋರ್ಟ್‌ ಎತ್ತಿಹಿಡಿದಿದ್ದ ಬಂಧನ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಕೇಜ್ರಿ

ನವದೆಹಲಿ,ಆ.12– ದೆಹಲಿ ಅಬಕಾರಿ ನೀತಿ ಹಗರಣದಿಂದ ಉಂಟಾದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ, ತಮ್ಮ ಬಂಧನವನ್ನು ಎತ್ತಿಹಿಡಿದ ದೆಹಲಿ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ದೆಹಲಿ ಹೈಕೋರ್ಟ್‌ ಆಗಸ್ಟ್‌ 5ರಂದು ಮುಖ್ಯಮಂತ್ರಿಯ ಬಂಧನವನ್ನು ಕಾನೂನುಬದ್ಧವೆಂದು ಎತ್ತಿಹಿಡಿದಿದೆ ಮತ್ತು ಕೇಂದ್ರೀಯ ತನಿಖಾ ದಳದ (ಸಿಬಿಐ) ಕೃತ್ಯಗಳಲ್ಲಿ ಯಾವುದೇ ದುರುದ್ದೇಶವಿಲ್ಲ ಎಂದು ಹೇಳಿದೆ.
ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮೇಲನವಿ ಅರ್ಜಿ ಸಲ್ಲಿಸಿದ್ದಾರೆ ಎಂದು ಪ್ರಕರಣಕ್ಕೆ ಸಂಬಂಧಿಸಿದ ವಕೀಲರು ತಿಳಿಸಿದ್ದಾರೆ.

ಕೇಜ್ರಿವಾಲ್‌ ಬಂಧನವನ್ನು ಎತ್ತಿ ಹಿಡಿದಿರುವ ಹೈಕೋರ್ಟ್‌, ನಿಯಮಿತ ಜಾಮೀನು ಕೋರಿ ಮೊದಲು ವಿಚಾರಣಾ ನ್ಯಾಯಾಲಯಕ್ಕೆ ತೆರಳುವಂತೆ ಮುಖ್ಯಮಂತ್ರಿಗಳಿಗೆ ಸೂಚಿಸಿತ್ತು.

ಮಾರ್ಚ್‌ 21ರಂದು ಜಾರಿನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿದ್ದ ಮುಖ್ಯಮಂತ್ರಿಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯ ಜೂನ್‌ 20ರಂದು ಜಾಮೀನು ನೀಡಿತ್ತು. ಆದರೆ ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿತ್ತು.ಜುಲೈ 12ರಂದು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್‌ ಅವರಿಗೆ ಮಧ್ಯಂತರ ಜಾಮೀನು ನೀಡಿತು.

ದೆಹಲಿ ಲೆಫ್ಟಿನೆಂಟ್‌ ಗವರ್ನರ್‌ ಅವರು ಅಬಕಾರಿ ನೀತಿಯ ರಚನೆ ಮತ್ತು ಕಾರ್ಯಗತಗೊಳಿಸುವಿಕೆಯನ್ನು ಒಳಗೊಂಡಿರುವ ಅಕ್ರಮಗಳು ಮತ್ತು ಭ್ರಷ್ಟಾಚಾರದ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಿದ ನಂತರ 2022ರಲ್ಲಿ ಅಬಕಾರಿ ನೀತಿಯನ್ನು ರದ್ದುಗೊಳಿಸಲಾಯಿತು.

ಸಿಬಿಐ ಮತ್ತು ಇಡಿ ಪ್ರಕಾರ, ಅಬಕಾರಿ ನೀತಿಯನ್ನು ಮಾರ್ಪಡಿಸುವಾಗ ಅಕ್ರಮಗಳನ್ನು ಎಸಗಲಾಗಿದೆ ಮತ್ತು ಪರವಾನಗಿ ಹೊಂದಿರುವವರಿಗೆ ಅನಗತ್ಯವಾದ ಅನುಕೂಲಗಳನ್ನು ವಿಸ್ತರಿಸಲಾಗಿದೆ.

RELATED ARTICLES

Latest News