ದೇಶದಲ್ಲಿ ಒಳ್ಳೆಯವರಿಗೆ ಉಳಿಗಾಲವಿಲ್ಲ: ಕೇಜ್ರಿವಾಲ್

Social Share

ನವದೆಹಲಿ,ಮಾ.8-ದೇಶದಲ್ಲಿ ಒಳ್ಳೆಯ ಕೆಲಸ ಮಾಡುವವರನ್ನು ಬಂಧಿಸಲಾಗುತ್ತಿದೆ. ಆದರೆ, ಲೂಟಿ ಮಾಡುವವರು ಬಂಧನದಿಂದ ಪಾರಾಗುತ್ತಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇಶದ ಒಳಿತಿಗಾಗಿ ಒಂದು ದಿನದ ಪೂಜೆ ಪ್ರಾರಂಭಿಸಿರುವ ಕೇಜ್ರಿವಾಲ್ ಅವರು ಇಂದು ರಾಜ್‍ಘಾಟ್‍ನಲ್ಲಿರುವ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಸಮಾಧಿಗೆ ಶ್ರದ್ದಾಂಜಲಿ ಸಲ್ಲಿಸಿದ ನಂತರ ಅವರು ಮಾತನಾಡಿದರು.

ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ಅವರುಗಳು ತಮ್ಮ ಕಠಿಣ ಪರಿಶ್ರಮದಿಂದ ್ತ ಬಡವರಿಗೆ ಗುಣಮಟ್ಟದ ಶಿಕ್ಷಣ ಮತ್ತು ಆರೋಗ್ಯವನ್ನು ಖಾತ್ರಿಪಡಿಸುವ ಕಾರ್ಯದಲ್ಲಿ ನಿರತರಾಗಿದ್ದರು ಅಂತಹ ವ್ಯಕ್ತಿಗಳನ್ನು ಬಂಧಿಸಿರುವುದನ್ನು ನೋಡಿದರೆ ನಮ್ಮ ದೇಶದ ಸ್ಥಿತಿಗತಿಗಳ ಬಗ್ಗೆ ಚಿಂತಿಸಬೇಕಾಗಿದೆ ಎಂದಿದ್ದಾರೆ.

ಮತ್ತೆ ಭಾರತಕ್ಕೆ ಆಗಮಿಸಲು ಕಾತುರದಿಂದ ಕಾಯುತ್ತಿದ್ದೇನೆ : ಬಿಲ್ ಗೇಟ್ಸ್

ದೇಶದ ಒಳಿತಿಗಾಗಿ ನಾನು ಹೋಳಿಯನ್ನು ಧ್ಯಾನಿಸುತ್ತೇನೆ ಮತ್ತು ಪ್ರಾರ್ಥಿಸುತ್ತೇನೆ, ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರವನ್ನು ಸರಿಯಾಗಿ ನಡೆಸುತ್ತಿಲ್ಲ ಎಂದು ನೀವು ಭಾವಿಸಿದರೆ, ನೀವು ಹಬ್ಬವನ್ನು ಆಚರಿಸಿದ ನಂತರ ದೇಶಕ್ಕಾಗಿ ಪ್ರಾರ್ಥಿಸಬೇಕು ಎಂದು ಅವರು ಕರೆ ನೀಡಿದ್ದಾರೆ.

ತಂದೆ ನೀಚ ಕಾರ್ಯದ ಬಗ್ಗೆ ಹೇಳಿಕೆ ನೀಡಿರುವುದರಿಂದ ಮುಜುಗರವಿಲ್ಲ: ಖುಷ್ಬು

ಕಳೆದ ಫೆಬ್ರವರಿ 26 ರಂದು ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿದ್ದು, ಸೋಮವಾರ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈನ್ ಅವರನ್ನು ಕಳೆದ ವರ್ಷ ಮೇ ತಿಂಗಳಲ್ಲಿ ಇಡಿ ಬಂಧಿಸಿತ್ತು.

Arvind Kejriwal, pays, homage, Mahatma Gandhi, Rajghat,

Articles You Might Like

Share This Article