Friday, May 3, 2024
Homeರಾಷ್ಟ್ರೀಯಇಡಿ ನೀಡಿದ ಮತ್ತೊಂದು ಸಮನ್ಸ್‍ಗೂ ಕೇಜ್ರಿ ಡೋಂಟ್‍ಕೇರ್

ಇಡಿ ನೀಡಿದ ಮತ್ತೊಂದು ಸಮನ್ಸ್‍ಗೂ ಕೇಜ್ರಿ ಡೋಂಟ್‍ಕೇರ್

ನವದೆಹಲಿ, ಮಾ 18 (ಪಿಟಿಐ) ದೆಹಲಿ ಜಲ ಮಂಡಳಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ಕೂಡ ಇಡಿ ಮುಂದೆ ಹಾಜರಾಗಲು ನಿರಾಕರಿಸಿದ್ದಾರೆ. ಆಮ್ ಆದ್ಮಿ ಪಕ್ಷವು (ಎಎಪಿ) ಸಮನ್ಸ್ ಅನ್ನು ಕಾನೂನುಬಾಹಿರ ಎಂದು ಕರೆದಿದೆ ಮತ್ತು ಕೇಂದ್ರದ ಬಿಜೆಪಿ ಸರ್ಕಾರವು ಕೇಜ್ರಿವಾಲ್ ಅವರನ್ನು ಗುರಿಯಾಗಿಸಲು ಜಾರಿ ನಿರ್ದೇಶನಾಲಯವನ್ನು (ಇಡಿ) ಬಳಸುತ್ತಿದೆ ಎಂದು ಆರೋಪಿಸಿದೆ.

ಡಿಜೆಬಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಯಲ್ಲಿ ಇಡಿ ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಕರೆದಿತ್ತು. ಎಎಪಿ ರಾಷ್ಟ್ರೀಯ ಸಂಚಾಲಕರೂ ಆಗಿರುವ 55ರ ಹರೆಯದ ರಾಜಕಾರಣಿಗೆ ಸಮನ್ಸ್ ನೀಡಲಾಗಿರುವ ಅಕ್ರಮ ಹಣ ವರ್ಗಾವಣೆ ತಡೆ ಕಾನೂನಿನಡಿ ದಾಖಲಾಗಿರುವ ಎರಡನೇ ಪ್ರಕರಣ ಇದಾಗಿದೆ.

ದೆಹಲಿ ಅಬಕಾರಿ ನೀತಿ ಸಂಬಂ„ತ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಅವರು ಈಗಾಗಲೇ ವಿಚಾರಣೆಗೆ ಸಮನ್ಸ್ ಎದುರಿಸುತ್ತಿದ್ದಾರೆ. ಕೇಜ್ರಿವಾಲ್ ಈ ಪ್ರಕರಣದಲ್ಲಿ ಇದುವರೆಗೆ ಎಂಟು ಸಮನ್ಸ್‍ಗಳನ್ನು ಬಿಟ್ಟುಬಿಟ್ಟಿದ್ದಾರೆ, ಅವುಗಳನ್ನು ಕಾನೂನುಬಾಹಿರ ಎಂದು ಹೇಳಿದ್ದಾರೆ.

ಅಬಕಾರಿ ನೀತಿ ಪ್ರಕರಣದಲ್ಲಿ ಅಂತಹ ಹೊಸ ಮತ್ತು ಒಂಬತ್ತನೇ ನೋಟೀಸ್ ಮಾರ್ಚ್ 21 ರಂದು ಇಡಿ ತನಿಖಾಧಿಕಾರಿಯ ಮುಂದೆ ಹಾಜರಾಗುವಂತೆ ಷರತ್ತು ವಿಧಿಸಿದೆ.

RELATED ARTICLES

Latest News