ಓವೈಸಿ ಕಾರಿನ ಮೇಲೆ ಗುಂಡು ಹಾರಿಸಿದ್ದ ಆರೋಪಿ ಹಾಗೂ ಪಿಸ್ತೂಲ್ ಸರಬರಾಜು ಮಾಡಿದ್ದವನ ಬಂಧನ

Social Share

ಲಖ್ನೋ,ಫೆ.5- ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರ ಕಾರಿನ ಮೇಲೆ ಗುಂಡು ಹಾರಿಸಿದ ಇಬ್ಬರು ವ್ಯಕ್ತಿಗಳ ಪೈಕಿ ಒಬ್ಬ ಆರೋಪಿ ಉತ್ತರಪ್ರದೇಶದ ಮೀರತ್‍ನಲ್ಲಿ ವ್ಯಕ್ತಿಯೊಬ್ಬನಿಂದ ಪಿಸ್ತೂಲು ಪಡೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡು ಹಾರಿಸಿದ್ದ ನೋಯ್ಡಾ ನಿವಾಸಿ ಸಚಿನ್ ಹಾಗೂ ಶುಭಂ ಎಂಬುವವರನ್ನು ಬಂಧಿಸಲಾಗಿದೆ.
ಆರೋಪಿ ಸಚಿನ್ ಉತ್ತರಪ್ರದೇಶದ ಮೀರತ್ ಜಿಲ್ಲೆಯ ತಲೀಂ ಎಂಬಾತನಿಂದ ಪಿಸ್ತೂಲ್ ಪಡೆದುಕೊಂಡಿದ್ದಾನೆ ಎಂಬುದು ಪೊಲೀಸರ ವಿಚಾರಣೆಯಿಂದ ತಿಳಿದುಬಂದಿದೆ. ಬಂಧಿತನಿಂದ 9 ಎಂಎಂ ಪಿಸ್ತೂಲ್‍ನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಶಸ್ತ್ರಾಸ್ತ್ರಗಳನ್ನು ಸರಬರಾಜು ಮಾಡುತ್ತಿದ್ದ ಆರೋಪದ ಮೇಲೆ ತಲೀಂನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಘಟನೆ ವಿವರ: ಗುರುವಾರ ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಮತ್ತು ಲೋಕಸಭಾ ಸಂಸದ ಅಸಾದುದ್ದೀನ್ ಓವೈಸಿ ಅವರು ಉತ್ತರ ಪ್ರದೇಶದ ಮೀರತ್‍ನಲ್ಲಿ ಚುನಾವಣಾ ಸಂಬಂತ ಕಾರ್ಯಕ್ರಮ ಮುಗಿಸಿ ದೆಹಲಿಗೆ ಹಿಂದಿರುಗುತ್ತಿದ್ದಾಗ ಛಜರ್ಸಿ ಟೋಲ್ ಪ್ಲಾಜ ಬಳಿ ಅವರ ಕಾರಿನ ಮೇಲೆ ಇಬ್ಬರು ವ್ಯಕ್ತಿಗಳು ಏಕಾಏಕಿ ಗುಂಡು ಹಾರಿಸಿದ್ದರು. ಸದ್ಯ ಘಟನೆಯಲ್ಲಿ ಯಾರಿಗೂ ಗಾಯಾಳಾಗಿಲ್ಲ. ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Articles You Might Like

Share This Article