Thursday, April 3, 2025
Homeರಾಷ್ಟ್ರೀಯ | Nationalಮುಸ್ಲಿಮರು ಕಾಂಡೋಮ್‌ಗಳನ್ನು ಹೆಚ್ಚು ಬಳಸುತ್ತಾರೆ : ಓವೈಸಿ

ಮುಸ್ಲಿಮರು ಕಾಂಡೋಮ್‌ಗಳನ್ನು ಹೆಚ್ಚು ಬಳಸುತ್ತಾರೆ : ಓವೈಸಿ

ಹೈದರಾಬಾದ್‌,ಏ.29- ಮುಸ್ಲಿಮರು ಕಾಂಡೋಮ್‌ಗಳನ್ನು ಹೆಚ್ಚು ಬಳಸುತ್ತಾರೆ ಎಂದು ಆಲ್‌ ಇಂಡಿಯಾಮಜ್ಲಿ ಸ್‌-ಎ-ಇತ್ತೆಹಾದುಲ್‌ ಮುಸ್ಲಿಮೀನ್‌ ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಓವೈಸಿ, ಮುಸ್ಲಿಮರು ಶೀಘ್ರದಲ್ಲೇ ಬಹುಸಂಖ್ಯಾತರಾಗುತ್ತಾರೆ ಎಂಬ ಭಯವನ್ನು ನರೇಂದ್ರ ಮೋದಿ ಇನ್ನೂ ಹಿಂದೂಗಳಲ್ಲಿ ಹರಡಲು ಪ್ರಯತ್ನಿಸುತ್ತಿದ್ದಾರೆ. ಎಷ್ಟು ದಿನ ಮುಸ್ಲಿಮರ ಬಗ್ಗೆ ಭಯ ಹುಟ್ಟಿಸುತ್ತೀರಿ. ನಮ್ಮ ಧರ್ಮ ಬೇರೆ ಆಗಿರಬಹುದು ಆದರೆ, ನಾವು ಕೂಡ ಈ ದೇಶದ ನಿವಾಸಿಗಳು ಎಂದಿದ್ದಾರೆ.

ಯಾಕೆ ದ್ವೇಷದ ಗೋಡೆ ಕಟ್ಟುತ್ತಿದ್ದೀರಿ? ಮುಸ್ಲಿಮರು ಹೆಚ್ಚು ಮಕ್ಕಳನ್ನು ಹೊಂದುತ್ತಾರೆ ಎಂಬ ಭಯವನ್ನು ಏಕೆ ಹರಡಲು ಪ್ರಯತ್ನಿಸುತ್ತಿದ್ದೀರಿ? ಮೋದಿ ಸರ್ಕಾರದ ಅಂಕಿಅಂಶಗಳ ಪ್ರಕಾರ, ಮುಸ್ಲಿಮರ ಜನಸಂಖ್ಯೆಯ ಬೆಳವಣಿಗೆ ದರ ಕುಸಿದಿದೆ ಎಂದಿದೆ. ಯಾಕೆಂದರೆ ಮುಸ್ಲಿಮರು ಕಾಂಡೋಮ್‌ಗಳನ್ನು ಹೆಚ್ಚಾಗಿ ಬಳಸುತ್ತಾರೆ. ಇದನ್ನು ಹೇಳಲು ನನಗೆ ಮುಜುಗರವಿಲ್ಲ ಎಂದು ಕಿಡಿಕಾರಿದರು.

ಕಳೆದ ವಾರ ರಾಜಸ್ಥಾನದ ಬನ್ಸ್ವಾರಾದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ, ಹಿಂದೂಗಳ ಮಂಗಳ ಸೂತ್ರ ಮುಸ್ಲಿಮರ ಪಾಲಾಗಲಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದ್ರೆ, ಹಿಂದೂ ಮಹಿಳೆಯ ಮಂಗಳಸೂತ್ರ ಸಹ ಉಳಿಯೋದಿಲ್ಲ ಎಂದು ಮೋದಿ ಹೇಳಿಕೆ ಕೊಟ್ಟಿದ್ದರು.

RELATED ARTICLES

Latest News