ಮುಂಬೈ,ಫೆ.12- ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‍ಗೆ ಭಾರೀ ಮರ್ಮಾಘಾತ ಉಂಟಾಗಿದ್ದು, ಮಾಜಿ ಮುಖ್ಯಮಂತ್ರಿ ಅಶೋಕ್ ಚವ್ಹಾಣ್ ಪಕ್ಷ ತೊರೆಯಲು ತೀರ್ಮಾನಿಸಿದ್ದು, ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮೂಲಗಳ ಪ್ರಕಾರ ಅಶೋಕ್ ಚವ್ಹಾಣ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಕಾಂಗ್ರೆಸ್‍ನ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ.
ಮಹಾರಾಷ್ಟ್ರದ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನಾನಾ ಪಟೋಳ್ ಅವರಿಗೆ ಒಂದು ಸಾಲಿನ ಪತ್ರ ಬರೆದಿರುವ ಚವ್ಹಾಣ್, ನಾನು ಕಾಂಗ್ರೆಸ್‍ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ರಾಜೀನಾಮೆ ಪತ್ರವನ್ನು ಅಂಗೀಕರಿಸಬೇಕೆಂದು ಕೋರಿದ್ದಾರೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಅಶೋಕ್ ಚವ್ಹಾಣ್, ಪಕ್ಷ ಬಿಡಲು ಮುಂದಾಗಿರುವುದು ಕಾಂಗ್ರೆಸ್‍ಗೆ ಭಾರೀ ಹಿನ್ನಡೆ ಎಂದೇ ಹೇಳಲಾಗಿದೆ.
ಬೆಂಬಲ ಬೆಲೆಗೆ ಆಗ್ರಹಿಸಿ ರೈತರಿಂದ ದೆಹಲಿ ಚಲೋ
ಕೆಲದಿನಗಳ ಹಿಂದೆ ಪಕ್ಷದ ಪ್ರಮುಖರಾದ ಮಿಲಿಂದ್ ದೇವೂರ ಹಾಗೂ ಬಾಬಾ ಸಿದ್ದಕ್ಕಿ ಪಕ್ಷಕ್ಕೆ ಗುಡ್ ಬೈ ಹೇಳಿದ್ದರು. ಇದೀಗ ಅಶೋಕ್ ಚವ್ಹಾಣ್ ನಿರ್ಗಮನ ಹೊಡೆತದ ಮೇಲೆ ಹೊಡೆತ ಕೊಟ್ಟಂತಾಗಿದೆ.