ಮತದಾರರ ಮಾಹಿತಿ ಸಂಗ್ರಹ ಆರೋಪ : ಸಚಿವ ಅಶ್ವತ್ಥನಾರಾಯಣ ಪ್ರತಿಕ್ರಿಯೆ

Social Share

ಬೆಂಗಳೂರು,ನ.17- ಖಾಸಗಿ ಸಂಸ್ಥೆಯಿಂದ ಮತದಾರರ ಮಾಹಿತಿ ಸಂಗ್ರಹದ ಆರೋಪಕ್ಕೂ ರಾಜ್ಯ ಸರ್ಕಾರಕ್ಕೂ ಸಂಬಂಧವಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಆಯೋಗದಡಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಯುವುದರಿಂದ ಈ ಆರೋಪ ಚುನಾವಣಾ ಆಯೋಗಕ್ಕೆ ಸಂಬಂಧಿಸಿದ್ದು, ಇದರ ಬಗ್ಗೆ ತನಿಖೆ ಮಾಡಿಸಲು ನಾವು ಯಾರು ಎಂದು ಪ್ರಶ್ನಿಸಿದರು.

ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಆರೋಪ ಮಾಡಿದವರು ಆಯೋಗಕ್ಕೆ ದೂರು ನೀಡಲಿ. ಪರಿಷ್ಕರಣೆಯಲ್ಲಿ ಖಾಸಗಿ ಸಂಸ್ಥೆ ಏನು ಮಾಡಿದೆ ಎಂಬುದು ಗೊತ್ತಿಲ್ಲ. ಆಯೋಗದಡಿ ಇಂತಹ ಸರ್ವೇ ಕಾರ್ಯಗಳು ನಡೆಯುತ್ತವೆ ಎಂದರು.

ಮತದಾರರ ಪಟ್ಟಿ ಪರಿಷ್ಕರಣೆಗೆ ಖಾಸಗಿ ಸಂಸ್ಥೆ ಅವಕಾಶ ಮಾಡಿಕೊಟ್ಟಿರುವ ವಿಚಾರದಲ್ಲಿ ಸರ್ಕಾರದ ಮೇಲೆ ಕಾಂಗ್ರೆಸ್ ನಾಯಕರು ಮಾಡಿರುವ ಆರೋಪದಲ್ಲಿ ಹುರುಳಿಲ್ಲ. ಖಾಸಗಿ ಸಂಸ್ಥೆಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ. ಯಾರೇ ತಪ್ಪು ಮಾಡಿದ್ದರೂ ತಪ್ಪೇ ಎಂದು ಹೇಳಿದರು.

ಕೈ ನಾಯಕಿ ಗಾಯತ್ರಿ ಶಾಂತೇಗೌಡ ನಿವಾಸದ ಮೇಲೆ ಐಟಿ ದಾಳಿ

ಕಾಂಗ್ರೆಸ್ನವರು ಒಳ್ಳೆಯದು ಮಾಡಿಲ್ಲ. ಒಳ್ಳೆಯದು ಮಾಡಲು ಬಿಡುವುದಿಲ್ಲ ಎಂದ ಅವರು, ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಕಾಂಗ್ರೆಸ್ನವರಿಗೆ ನೈತಿಕತೆ ಇಲ್ಲ ಎಂದು ಹೇಳಿದರು.

BIG NEWS : ಮತ್ತೊಂದು ಬೃಹತ್ ಅಕ್ರಮದ ಬಾಂಬ್ ಸಿಡಿಸಿದ ಕಾಂಗ್ರೆಸ್..!

Bengaluru, #VoterDataIrregularities, #VoterList #ElectionCommission

Articles You Might Like

Share This Article