ಬೆಂಗಳೂರು, ಫೆ. 20- ಪವರ್‍ಸ್ಟಾರ್ ಪುನೀತ್‍ರಾಜ್‍ಕುಮಾರ್ ಅವರ ಅಗಲಿಕೆಯ ನೋವು ಮಾಸುವ ಮುನ್ನವೇ ಅಶ್ವಿನಿಗೆ ಮತ್ತೊಂದು ಆಘಾತ ಬರಸಿಡಿಲಿನಂತೆ ಬಡಿಯುವ ಮೂಲಕ ಅವರನ್ನು ಮತ್ತಷ್ಟು ಕುಗ್ಗಿಸಿದೆ.
ಅಶ್ವಿನಿ ಅವರ ತಂದೆ ರೇವನಾಥ್ (78) ಅವರಿಗೆ ಇಂದು ಬೆಳಗ್ಗೆ ಅನಾರೋಗ್ಯ ಉಂಟಾಗಿದ್ದರಿಂದ ಅವರನ್ನು ನಗರದ ಎಂಎಸ್ ರಾಮಯ್ಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತಾದರೂ ಹೃದಯಾಘಾತದಿಂದ ಅವರು ನಿಧನರಾಗಿದ್ದಾರೆ.
ಚಿಕ್ಕಮಗಳೂರಿನ ಮೂಡಿಗೆರೆ ತಾಲ್ಲೂಕಿನ ಭಾಗಮನೆಯ ಮೂಲದವರಾದ ರೇವನಾಥ್ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI)ದಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ರೇವನಾಥ್ ಅವರು ಹಿರಿಯ ರಾಜಕಾರಣಿ ಡಿ.ಬಿ.ಚಂದ್ರೇಗೌಡ ಅವರ ಹತ್ತಿರದ ಸಂಬಂಧಿಯಾಗಿದ್ದರು.
ಆರ್.ಟಿ ನಗರದಲ್ಲಿ ವಾಸವಾಗಿದ್ದ ಅವರು ಆರೋಗ್ಯವಾಗಿಯೇ ಇದ್ದರು. ಕಳೆದ ರಾತ್ರಿ ಅವರಿಗೆ ಉಸಿಯಾಟದ ತೊಂದರೆ ಕಾಣಿಸಿಕೊಂಡ ನಂತರ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇಂದು ಮಧ್ಯಾಹ್ನ ಅವರಿಗೆ ತೀವ್ರ ಹೃದಯಾಘಾತವಾಗಿದ್ದು ವೈದ್ಯರು ತುರ್ತು ಚಿಕಿತ್ಸೆ ನೀಡರಾದರೂ ಅದು ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
