ಪುನೀತ್ ಪರ್ವ ಕಾರ್ಯಕ್ರಮಕ್ಕೆ ಸಿಎಂಗೆ ಅಹ್ವಾನ ನೀಡಿದ ಅಶ್ವಿನಿ

Social Share

ಬೆಂಗಳೂರು,ಅ.11-ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ಗಂಧಗುಡಿ ಪ್ರೀ ರಿಲೀಸ್ ಇವೆಂಟ್ ಪುನೀತ್ ಪರ್ವಕ್ಕೆ ಆಗಮಿಸುವಂತೆ ಅಶ್ವಿನಿ ಪುನೀತ್ ರಾಜ್‍ಕುಮಾರ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಆಹ್ವಾನ ನೀಡಿದರು.

ಮುಖ್ಯಮಂತ್ರಿ ಭೇಟಿಯ ನಂತರ ಮಾತನಾಡಿದ ನಟ ರಾಘವೇಂದ್ರ ರಾಜ್‍ಕುಮಾರ್, ಅಕ್ಟೋಬರ್ 28ಕ್ಕೆ ಗಂಧದ ಗುಡಿ ಸಿನಿಮಾ ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ಅಕ್ಟೋಬರ್ 21ರಂದು ಗಂಧದ ಗುಡಿ ಪ್ರೀ ರಿಲೀಸ್ ಈವೆಂಟ್ ಇದ್ದು, ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಯವರನ್ನು ಆಹ್ವಾನಿಸಲು ಬಂದಿದ್ದೆವು ಎಂದರು.

ದಕ್ಷಿಣ ಭಾರತದ ಚಿತ್ರರಂಗದ ತಾರೆಯರನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದೇವೆ. ಕಾರ್ಯಕ್ರಮಕ್ಕೆ ಬರುವ ಬಗ್ಗೆ ಇನ್ನು ಖಚಿತವಾಗಬೇಕಿದೆ. ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಅರಮನೆ ಮೈದಾನದಲ್ಲಿ ಗಂಧದಗುಡಿ ಪ್ರೀ ಇವೆಂಟ್ ಇದ್ದು ಇದಕ್ಕೆ ಪುನೀತ್ ಪರ್ವ ಎಂದು ಹೆಸರಿಡಲಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಮತ್ತಿತರರು ಇದ್ದರು.

Articles You Might Like

Share This Article