ಮೊಬೈಲ್ ಕಳ್ಳನಿಂದ ಎಎಸ್‍ಐ ಕೊಲೆ

Social Share

ನವದೆಹಲಿ, ಜ .9- ಮೊಬೈಲ್ ಫೋನ್ ಸುಲಿಗೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಹಿಡಿಯಲು ಹೋದ ದೆಹಲಿ ಪೊಲೀಸ್ ಸಹಾಯಕ ಸಬ್ ಇನ್ಸ್‍ಪೆಕ್ಟರ್‍ಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

ಮೂಲತ ರಾಜಸ್ಥಾನದ ಸಿಕರ್ ಜಿಲ್ಲೆಯವರಾದ ಎಎಸ್‍ಐ ಶಂಭು ದಯಾಳ್ (57) ಅವರು ಪತ್ನಿ, ಒಬ್ಬ ಪುತ್ರ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಕಳೆದ ಬುಧವಾರ ದೆಕಲಿಯ ಮಾಯಾಪುರಿ ಮಹಿಳೆಯೊಬ್ಬರು ದುಷ್ಕರ್ಮಿಯೊಬ್ಬ ಬೆದರಿಕೆ ಹಾಕಿ ತಮ್ಮ ಪತಿಯ ಮೊಬೈಲ್ ಫೋನ್ ಕಿತ್ತುಕೊಂಡು ಹೋಗಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದರು.

ಆರೋಪಿಗಳನ್ನು ಗುರುತಿಸಿದ ಆತನಿದ್ದ ಸ್ಥಳಕ್ಕೆ ಎಎಸ್‍ಐ ದಯಾಳ್ ಹೋಗಿ ಆರೋಪಿ ಅನೀಶ್ ಎಂಬಾತನನ್ನು ಹಿಡಿದು ಪೊಲೀಸ್ ಠಾಣೆಗೆ ಕರೆದೊಯ್ಯುವಾಗ, ಅವನು ತನ್ನ ಅಂಗಿಯಲ್ಲಿ ಇಟ್ಟುಕೊಂಡಿದ್ದ ಚಾಕುವಿನಿಂದ ದಯಾಲ್ ಅವರ ಕುತ್ತಿಗೆ, ಎದೆ, ಹೊಟ್ಟೆ ಮತ್ತು ಬೆನ್ನಿನ ಮೇಲೆ ಇರಿದು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾನೆ ಆದರೂ ಬಿಡಲಿಲ್ಲ ಘಟನೆಯ ಬಗ್ಗೆ ಮಾಯಾಪುರಿ ಪೊಲೀಸ್‍ಸಿಬ್ಬಂದಿ ಮಹಿತಿ ಪಡೆದು ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ಬಂಧಿಸಲಾಯಿತು.

ಅಕ್ರಮವಾಗಿ ಶಸ್ತ್ರಾಸ್ತ್ರ ಪೂರೈಕೆ ಮಾಡುತ್ತಿದ್ದ ಗ್ಯಾಂಗ್ ಸೆರೆ

ನಂತರ ಎಎಸ್‍ಐ ದಯಾಳ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಉಪ ಪೊಲೀಸ್ ಆಯುಕ್ತ (ಪಶ್ಚಿಮ) ಘನಶ್ಯಾಮ್ ಬನ್ಸಾಲ್ ಹೇಳಿದ್ದಾರೆ. ನಾಲ್ಕು ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ ಅವರು ಮೃತಪಟ್ಟರು ಎಂದು ತಿಳಿಸಿದ್ದಾರೆ.

ದೆಹಲಿ ಪೊಲೀಸ್ ಕಮಿಷನರ್ ಸಂಜಯ್ ಅರೋರಾ ಅವರು ಜನಕ್ಪುರಿ ಪಶ್ಚಿಮ ಡಿಸಿಪಿ ಕಚೇರಿ ಸಂಕೀರ್ಣದಲ್ಲಿ ದಯಾಳ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು ಮತ್ತು ದುಃಖಿತ ಕುಟುಂಬಕ್ಕೆ ಸಾಂತ್ವನ ಹೇಳಿದರು. ವಿಶೇಷ ಪೊಲೀಸ್ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ಸಾಗರ್ ಪ್ರೀತ್ ಹೂಡಾ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಗೌರವ ಸಲ್ಲಿಸಿದರು.

ASI, dies, being, stabbed, phone, thief,

Articles You Might Like

Share This Article