ಅಸ್ಸಾಂ ವಿಧಾನಸಭೆಯಲ್ಲಿ ಎನ್‍ಕೌಂಟರ್ ಗಲಾಟೆ

Social Share

ಗುವಾಹಟಿ,ಡಿ.24- ಅಸ್ಸಾಂನಲ್ಲಿ ನಡೆದ ಎನ್‍ಕೌಂಟರ್‍ಗಳ ಕುರಿತು ಸದನದಲ್ಲಿ ಕಾವೇರಿದ ಚರ್ಚೆಯಾಗಿ, ವಿಧಾನಸಭೆ ಕಲಾಪವನ್ನು ಒಂದು ಗಂಟೆಗಳ ಕಾಲ ಮುಂದೂಡಬೇಕಾದ ವಾತಾವರಣ ನಿರ್ಮಾಣವಾಯಿತು.

ಗೃಹ ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಪರವಾಗಿ ಸಂಸದೀಯ ವ್ಯವಹಾರಗಳ ಸಚಿವ ಪಿಜೂಶ್ ಹಜಾರಿಕಾ ಪ್ರತಿಪಕ್ಷಗಳ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಯಾವುದೇ ಎನ್‍ಕೌಂಟರ್ ನಡೆದಿಲ್ಲ. ಆದರೆ ಶಂಕಿತ ಅಪರಾಧಿಗಳು ತಪ್ಪಿಸಿಕೊಳ್ಳಲು ಪ್ರಯತ್ನಿಸುವಾಗ ಪೊಲೀಸ್ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಮತ್ತು ಕೆಲವರ ಗಾಯಗೊಂಡಿದ್ದಾರೆ ಎಂದು ಹೇಳಿದರು.

ಈ ಹೇಳಿಕೆಯನ್ನು ಒಪ್ಪದ ಪಕ್ಷೇತರ ಶಾಸಕ ಅಖಿಲ್ ಗೋಗಯ್, ಸಚಿವರ ಹೇಳಿಕೆ ತಪ್ಪು ಎಂದು ಆಕ್ರೋಶ ವ್ಯಕ್ತ ಪಡಿಸಿದರು. ಆಗ ಕಾಂಗ್ರೆಸ್ ಶಾಸಕರೂ ಎದ್ದು ನಿಂತು ಹಜಾರಿಕಾ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದರು.

30 ಅಡಿ ಕಂದಕಕ್ಕೆ ಉರುಳಿ ಬಿದ್ದ ಶಾಸಕರ ಕಾರು

ಈ ವೇಳೆ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷಗಳ ಶಾಕರ ನಡುವೆ ಕಾವೇರಿದ ಚರ್ಚೆ ನಡೆಯಿತು. ಆಡಳಿತ ಪಕ್ಷದ ಸದಸ್ಯೆ ರೂಪಜ್ಯೋತಿ ಕುರ್ಮಿ, ವಿರೋಧ ಪಕ್ಷಗಳ ವಿರುದ್ಧ ಕೆಲವು ಆರೋಪಗಳನ್ನು ಮಾಡಿದರು. ಇದಕ್ಕೂ ಭಾರೀ ಆಕ್ಷೇಪ ಕೇಳಿ ಬಂತು.

ಎಐಯುಡಿಎಫ್ ಸೇರಿದಂತೆ ಎಲ್ಲಾ ವಿರೋಧ ಪಕ್ಷಗಳು ರೂಪಜ್ಯೋತಿ ಹೇಳಿಕೆಯನ್ನು ವಿರೋಧಿಸಿ, ಗದ್ದಲ ಮಾಡಿದರು. ಇದರಿಂದ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಮಾತಿನ ಚಕಮಕಿ ನಡೆಯಿತು, ಕೊನೆಗೆ ರೂಪಜ್ಯೋತಿ ಹೇಳಿಕೆಯನ್ನು ಕಡತದಿಂದ ತೆಗೆಯಲಾಯಿತು. ಸ್ಪೀಕರ್ ಬಿಸ್ವಜಿತ್ ಡೈಮರಿ ಪರಿಸ್ಥಿತಿಯನ್ನು ತಿಳಿಗೊಳಿಸಲು ಪ್ರಯತ್ನಿಸಿದರು.

ಸಭಾಧ್ಯಕ್ಷರನ್ನು ಉದ್ದೇಶಿಸಿ ಮಾತನಾಡಿದ ಅಖಿಲ್ ಗೊಗೊಯ್, ಆಡಳಿತ ಶಾಸಕರು ಏನು ಮಾಡುತ್ತಿದ್ದಾರೆ ಎಂದು ಸ್ಪೀಕರ್ ಅವರು ನೋಡಲಾಗುತ್ತಿಲ್ಲವೇ ಎಂದು ಪ್ರಶ್ನಿಸಿದರು.

ಅಯ್ಯಪ್ಪನ ದರ್ಶನ ಮಾಡಿ ವಾಪಸ್ಸಾಗುತ್ತಿದ್ದಾಗ ವಾಹನ ಅಪಾಘಾತ, 8 ಭಕ್ತರ ಸಾವು

ಈ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಡೈಮರಿ, ನೀವು ಅಧ್ಯಕ್ಷರ ಜತೆ ಈ ರೀತಿ ಮಾತನಾಡುವಂತಿಲ್ಲ ಎಂದು ಎಚ್ಚರಿಕೆ ನೀಡಿದರು. ಸದನ ಚರ್ಚೆಗಾಗಿಯೇ ಹೊರತು ಜಗಳಕ್ಕಲ್ಲ ಎಂದು ಸ್ಪಷ್ಟವಾಗಿ ತಿಳಿಸಿದರು.
ಆಡಳಿತ ಮತ್ತು ಪ್ರತಿಪಕ್ಷಗಳ ಪೀಠಗಳ ಸದಸ್ಯರು ಆರೋಪ-ಪ್ರತ್ಯಾರೋಪ ಮುಂದುವರಿಸಿದ್ದರಿಂದ ಸ್ಪೀಕರ್ ಕಲಾಪವನ್ನು ಒಂದು ಗಂಟೆ ಕಾಲ ಮುದೂಡಿದರು.

Assam, Assembly, adjourned, encounters, discussion,

Articles You Might Like

Share This Article