ಅಸ್ಸಾಂನಲ್ಲಿ 210 ಕೋಟಿ ಮೌಲ್ಯದ ಹೆರಾಯಿನ್ ವಶ

ಗುವಾಹಟಿ,ಏ. 5 (ಪಿಟಿಐ) : ಅಸ್ಸಾಂನಲ್ಲಿ ನಡೆದ ಅತಿ ದೊಡ್ಡ ಮಾದಕ ದ್ರವ್ಯ ದಂಧೆಯಲ್ಲಿ 210 ಕೋಟಿ ರೂಪಾಯಿ ಮೌಲ್ಯದ ಹೆರಾಯಿನ್ ಅನ್ನು ಕ್ಯಾಚಾರ್ ಜಿಲ್ಲೆಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಶಪಡಿಸಿಕೊಳ್ಳುವಿಕೆಗೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಸಹ ಬಂಧಿಸಲಾಗಿದೆ ಎಂದು ಅವರು ಹೇಳಿದರು. ವಿಶೇಷ ಕಾರ್ಯಪಡೆ (ಎಸ್‍ಟಿಎಫ್ ) ಮತ್ತು ಕ್ಯಾಚಾರ್ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಮಿಜೋರಾಂನಿಂದ ಬಂದ ವಾಹನವನ್ನು ಸಿಲ್ಚಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಸಯೀದ್‍ಪುರದಲ್ಲಿ ತಡೆಹಿಡಿದು ಪರಿಶೀಲಿಸಿದಾಗ ಭಾರಿ ಮೌಲ್ಯದ ಹೆರಾಯಿನ್ ಪತ್ತೆಯಾಗಿದೆ … Continue reading ಅಸ್ಸಾಂನಲ್ಲಿ 210 ಕೋಟಿ ಮೌಲ್ಯದ ಹೆರಾಯಿನ್ ವಶ