ಬೆಂಗಳೂರು,ಸೆ.15- ಕತ್ತು ನೋವಿನಿಂದ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಧಾನಸಭೆಯ ಉಪಸಭಾಧ್ಯಕ್ಷ ಆನಂದ್ ಮಾಮನಿ ಅವರ ಆರೋಗ್ಯ ಸುಧಾರಿಸಿದೆ ಎಂದು ತಿಳಿದುಬಂದಿದೆ. ಎರಡು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಮಾಮನಿ ಅವರಿಗೆ ಚಿಕಿತ್ಸೆ ನೀಡಲಾಗಿದ್ದು, ಆತಂಕಪಡಬೇಕಾಗಿಲ್ಲ ಎಂದು ಆಸ್ಪತ್ರೆ ವೈದ್ಯರು ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಆಸ್ಪತ್ರೆಗೆ ದಾಖಲಾದ ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೂರವಾಣಿ ಕರೆ ಮಾಡಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ.
ಇದನ್ನೂ ಓದಿ : BIG NEWS : ಉಕ್ರೇನ್ ಅಧ್ಯಕ್ಷ ಝೆಲೆನ್‍ಸ್ಕಿ ಕಾರು ಅಪಘಾತ, ಗಂಭೀರ ಗಾಯ
ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ತೀವ್ರ ಕತ್ತು ನೋವಿನಿಂದ ಬಳಲಿದ್ದಾರೆ. ಆತಂಕಪಡಬೇಕಾದ ಅಗತ್ಯವಿಲ್ಲ ಎಂದು ಸಿಎಂಗೆ ವೈದ್ಯರು ಕೂಡ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗಿದೆ. ಇನ್ನೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಸದನಕ್ಕೆ ಹಾಜರಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.