ಬೆಂಗಳೂರು,ಜ.25- ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯ ದಿನಗಳು ಸಮೀಪಿ ಸುತ್ತಿರುವಂತೆ ಪ್ರತಿಪಕ್ಷ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ಬಿರುಸಿನ ಚಟುವಟಿಕೆ ಆರಂಭಿಸಿದೆ. ಜನವರಿ 27ರಂದು ಕೆಪಿಸಿಸಿ ಕಚೇರಿಯ ನೂತನ ಕಟ್ಟಡದ ಸಭಾಂಗಣದಲ್ಲಿ ಪಕ್ಷದ ಪ್ರಮುಖರ ಸಭೆ ಕರೆಯಲಾಗಿದೆ. ಸಭೆಯಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ಎಲ್ಲರಿಗೂ ಕಟ್ಟಪ್ಪಣೆ ಮಾಡಲಾಗಿದೆ.
ಸಂಸದರು, ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರು, ಕೆಪಿಸಿಸಿ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, 2019ರ ಲೋಕಸಭೆ ಚುನಾವಣೆ ಹಾಗೂ 2018ರ ವಿಧಾನಸಭೆ ಅಭ್ಯರ್ಥಿಗಳು, ಸ್ಥಳೀಯ ಸಂಸ್ಥೆಗಳ ಪರಿಷತ್ ಅಭ್ಯರ್ಥಿಗಳು, ಮುಂಚೂಣಿ ಘಟಕಗಳ, ಸೆಲ್ಗಳ, ವಿವಿಧ ವಿಭಾಗಗಳ ರಾಜ್ಯಾಧ್ಯಕ್ಷರು, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರು ತಪ್ಪದೆ ಸಭೆಯಲ್ಲಿ ಭಾಗವಹಿಸಬೇಕು ಎಂದು ರಾಜ್ಯಾಧ್ಯಕ್ಷರು ಸೂಚಿಸಿದ್ದಾರೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಬಿ.ಕೆ.ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಸೇರಿದಂತೆ ಅನೇಕರು ಸಭೆಯ ನೇತೃತ್ವ ವಹಿಸಲಿದ್ದಾರೆ.
ಸಭೆಯಲ್ಲಿ 2023ರ ವಿಧಾನಸಭೆ ಚುನಾವಣೆ, ಪಕ್ಷ ಸಂಘಟನೆ, ಕೆಪಿಸಿಸಿ ಕಾರ್ಯಕ್ರಮಗಳ ಅನುಷ್ಠಾನ ಕುರಿತು ಚರ್ಚಿಸಲಾಗುತ್ತದೆ ಎಂದು ಸೂಚಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆ ಹೆಸರಲ್ಲಿ ವಂಚನೆ ವಂಚಿಸುತ್ತಿದ್ದ ಮೂವರ ಬಂಧನ
ಫೆಬ್ರವರಿ 2ರಂದು ರಾಜ್ಯ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಅಲ್ಲಿ ಮುಂದಿನ ಚುನಾವಣೆಯ ಅಭ್ಯರ್ಥಿಗಳ ಆಯ್ಕೆ ಬಹುತೇಕ ಅಂತಿಮಗೊಳ್ಳಲಿದೆ. ಕೆಪಿಸಿಸಿ ಈಗಾಗಲೇ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದ್ದು, ಸಾಮಾನ್ಯ ಕ್ಷೇತ್ರಗಳಲ್ಲಿ 2 ಲಕ್ಷ, ಮೀಸಲು ಕ್ಷೇತ್ರಗಳಲ್ಲಿ ತಲಾ ಒಂದು ಲಕ್ಷ ಠೇವಣಿ ಪಾವತಿಸಿ ಸಾವಿರಕ್ಕೂ ಹೆಚ್ಚು ಮಂದಿ ಅರ್ಜಿ ಸಲ್ಲಿಸಿದ್ದಾರೆ. ಜೊತೆಗೆ ಅರ್ಹ ಅಭ್ಯರ್ಥಿಗಳ ಆಯ್ಕೆಗೆ ಕೆಪಿಸಿಸಿ ಈಗಾಗಲೇ ತಳಮಟ್ಟದಿಂದ ಅಭಿಪ್ರಾಯ ಸಂಗ್ರಹಿಸಿದೆ, ಪ್ರತಿ ಕ್ಷೇತ್ರಕ್ಕೆ ವಿಕ್ಷರರನ್ನು ಕಳುಹಿಸಿ ವರದಿ ಪಡೆದುಕೊಂಡಿದೆ.
ಶತಾಯಗತಾಯ ಈ ಚುನಾವಣೆಯಲ್ಲಿ ಗೆಲ್ಲಲೇಬೇಕು ಎಂಬ ಕಾರಣಕ್ಕೆ ಕಾಂಗ್ರೆಸ್ ನಾನಾ ತಂತ್ರಗಾರಿಕೆಗಳನ್ನು ಅನುಸರಿಸಲಾರಂಭಿಸಿದೆ. ಸಭೆಗಳ ಮೇಲೆ ಸಭೆಗಳನ್ನು ನಡೆಸುತ್ತಿದೆ. ಒಂದೆಡೆ ಪ್ರಜಾಧ್ವನಿ ಯಾತ್ರೆಯಲ್ಲಿ ಸಾರ್ವಜನಿಕ ಸಮಾರಂಭಗಳನ್ನು ಆಯೋಜನೆ ಮಾಡುತ್ತಿದ್ದರೆ,
ಪೆಟ್ರೋಲ್ ಟ್ಯಾಂಕ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಇಬ್ಬರು ಸಾವು
ಮತ್ತೊಂದೆಡೆ ಸಮರ್ಥ ಅಭ್ಯರ್ಥಿಗಳ ಆಯ್ಕೆಗೆ ಪ್ರತಿಕ್ಷೇತ್ರದಲ್ಲಿ ಮೂವರು ಸಂಭವನೀಯ ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸಲು ಆಂತರಿಕ ಸಭೆಗಳನ್ನು ನಡೆಸಿದೆ. ಮುಂದಿನ ಚುನಾವಣಾ ಸಮಿತಿ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಬಹುತೇಕ ಅಖೈರುಗೊಳ್ಳಲಿದೆ ಎಂದು ಹೇಳಲಾಗಿದೆ.
assembly election, Congress, candidates, KPCC,